ನರೇಂದ್ರ ಮೋದಿ 
ಪ್ರಧಾನ ಸುದ್ದಿ

ವಂಶಾಡಳಿತಕ್ಕೆ ತೆರೆಯೆಳೆಯಿರಿ: ಮೋದಿ

ದೇಶದ ಜನತೆ ವಂಶಪಾರಂಪರ್ಯ ರಾಜಕಾರಣದಿಂದ ರೋಸಿ ಹೋಗಿದ್ದಾರೆ. ಆದ್ದರಿಂದ ಇಂಥಾ ರಾಜಕಾರಣಕ್ಕೆ ತೆರೆ...

ರಾಂಚಿ: ದೇಶದ ಜನತೆ ವಂಶಪಾರಂಪರ್ಯ ರಾಜಕಾರಣದಿಂದ ರೋಸಿ ಹೋಗಿದ್ದಾರೆ. ಆದ್ದರಿಂದ ಇಂಥಾ ರಾಜಕಾರಣಕ್ಕೆ ತೆರೆ ಎಳೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ಡಿಸೆಂಬರ್ 2ರಂದು ನಡೆಯಲಿರುವ ಎರಡನೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದ್ದು, ಆ ಪ್ರಯುಕ್ತ ಹಮ್ಮಿಕೊಳ್ಳಲಾಗಿರುವ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದರವರು.

ವಂಶಾಡಳಿತದಿಂದ ರೋಸಿ ಹೋಗಿರುವ ಜನರು ಲೋಕಸಭಾ ಚುನಾವಣೆಯಲ್ಲಿ ಅದಕ್ಕೆ ತೆರೆ ಎಳೆದಿದ್ದಾರೆ . ಇದೀಗ ಜಾರ್ಖಂಡ್‌ನಲ್ಲಿ ವಂಶಪಾರಂಪರ್ಯ ರಾಜಕೀಯಕ್ಕೆ ತೆರೆ ಎಳೆಯಬೇಕಾಗಿದೆ ಎಂದು ಹೇಳೀದ ಮೋದಿ ದೇಶದ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ವಿನಂತಿಸಿದ್ದಾರೆ.

ಜಾರ್ಖಂಡ್‌ನಲ್ಲಿ ನೈಸರ್ಗಿಕ ಸಂಪತ್ತು ಇದೆ, ಆದರೆ ಇದನ್ನು ರಾಜ್ಯ ಸರ್ಕಾರ ಕೊಳ್ಳೆ ಹೊಡೆಯುತ್ತಿದೆ. ಆದ್ದರಿಂದ ಬಿಜೆಪಿಯನ್ನು ಆಯ್ಕೆ ಮಾಡುವ ಮೂಲಕ ಅಭಿವೃದ್ಧಿಗೆ ನಾಂದಿ ಹಾಡುವ ಸಮಯ ಬಂದಿದೆ ಎಂದು  ಮೋದಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಹೊಸ  ಯೋಜನೆಗಳಿಂದ ಜಾರ್ಖಂಡ್‌ಗೆ ರು. 20 ಲಕ್ಷ ಕೋಟಿಯಷ್ಟು ಹಣ ಕಲ್ಲಿದ್ದಲಿನಿಂದ ಲಭಿಸಲಿದೆ. ಇದನ್ನು ರಾಜ್ಯದ ಅಭಿವೃದ್ಧಿಗೆ ಬಳಸಬಹುದು ಎಂದು ಹೇಳಿದ ಮೋದಿ ಜಾರ್ಖಂಡ್ ಅಭಿವೃದ್ಧಿಗೆ ಬಿಜೆಪಿ ಬದ್ಧವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮೂಲ ಧ್ಯೇಯದಿಂದ' ದೂರ ಸರಿದಿದೆ: ವಿಶ್ವ ಆರೋಗ್ಯ ಸಂಸ್ಥೆ ಸದಸ್ಯತ್ವದಿಂದ ಹೊರಬಂದ ಅಮೆರಿಕ!

ಭುಗಿಲೆದ್ದ ಬಂಡಾಯ, ಕಾಂಗ್ರೆಸ್ ವಿರುದ್ಧ ಸಿಡಿದೆದ್ದ ಶಶಿತರೂರ್: ರಾಹುಲ್ ಗಾಂಧಿ ವಿರುದ್ಧ ಅಸಮಾಧಾನ, ಪಕ್ಷದ ಚುನಾವಣಾ ಸಭೆಗೆ ಗೈರು!

ಡಾಲರ್ ಎದುರು ರೂಪಾಯಿ ಮತ್ತಷ್ಟು ದುರ್ಬಲ: ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಚಿನ್ನ- ಬೆಳ್ಳಿ ಬೆಲೆ!

ಕರ್ನಾಟಕದಲ್ಲಿ ಜಾಗತಿಕ ಸಾಮರ್ಥ್ಯ ಕೇಂದ್ರ ಸ್ಥಾಪಿಸಲು ನೋಕಿಯಾ ಒಲವು!

ಕೇರಳದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ, ತಿರುವನಂತಪುರವನ್ನು ಭಾರತದ ಉತ್ತಮ ನಗರವನ್ನಾಗಿ ಮಾಡುತ್ತೇವೆ: ಪ್ರಧಾನಿ ಮೋದಿ

SCROLL FOR NEXT