ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಪಾದರಕ್ಷೆ ಧರಿಸಿ ತಾಯಿ ಶ್ರೀ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿಲ್ಲ: ಸಿದ್ದು

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಪಾದರಕ್ಷೆ ಧರಿಸಿಕೊಂಡು...

Vishwanath S
Updated On : 6 Oct 2014, 7:50 am

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಚಾಲನೆ ನೀಡುವ ಸಂದರ್ಭದಲ್ಲಿ ಪಾದರಕ್ಷೆ ಧರಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

ಮೈಸೂರಿನ ದಸರಾ ಮೆರವಣಿಗೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಪಾದರಕ್ಷೆ ಧರಿಸಿ, ನಾಡಿನ ಅಧಿದೇವತೆ ಮಾತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡಿಲ್ಲ ಎಂದು ಪತ್ರಿಕಾ ಪ್ರಕಟಣೆ ಮೂಲಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ದಸರಾ ಮೆರವಣಿಗೆಗೆ ಚಾಲನೆ ನೀಡುವ ವೇಳೆ ಮುಖ್ಯಮಂತ್ರಿಗಳು ಪಾದರಕ್ಷೆ ಧರಿಸಿದ್ದರು ಎಂದು ಕೆಲವು ಮಾಧ್ಯಮಗಳು ಪ್ರಸಾರ ಮಾಡಿರುವ ವರದಿಗಳು ಸತ್ಯಕ್ಕೆ ದೂರವಾದವು ಎಂದು ತಿಳಿಸಿದ್ದಾರೆ

ನಾಡ ದೇವತೆ ಮಾತೆ ಶ್ರೀ ಚಾಮುಂಡೇಶ್ವರಿ ದೇವಿಯ ಬಗ್ಗೆ ಅಪಾರ ಗೌರವವನ್ನು ಹೊಂದಿರುವ ತಾವು ಜನರ ಮನಸ್ಸಿಗೆ ನೋವುಂಟು ಮಾಡುವ ಕೆಲಸವನ್ನು ಎಂದೂ ಮಾಡಿಲ್ಲ ಮತ್ತು ಮಾಡುವುದು ಇಲ್ಲ. ಮಾಧ್ಯಮಗಳು ಜನರ ಭಾವನೆಗಳನ್ನು ಕೆರಳಿಸುವ ಕಾರ್ಯ ಮಾಡಬಾರದು. ಅನಗತ್ಯ ವಿವಾದಗಳ ಸೃಷ್ಟಿಸಿ, ಹಬ್ಬದ ಸಂದರ್ಭದಲ್ಲಿ ಸಂತಸದ ವಾತಾವರಣವನ್ನು ಹಾಳುಗೆಡವುದು ಸಮಾಜದ ದೃಷ್ಠಿಯಿಂದಲೂ ಒಳಿತಲ್ಲ ಎಂದು ಸಿದ್ದರಾಮಯ್ಯ ಅವರು ತಮ್ಮ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement