4 ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ ಮೋದಿ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮುಂಬೈಗೆ...
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮುಂಬೈಗೆ ಆಗಮಿಸಲಿದ್ದು, 4 ರ್ಯಾಲಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಇಂದು ಸಿಂಗಾಲಿ, ಕೋಲ್ಹಾಪುರ್, ಗೋಂಡಿಯಾ ಮತ್ತು ನಾಶಿಕ್ನಲ್ಲಿರುವ ರ್ಯಾಲಿಯನ್ನುದ್ದೇಶಿಸಿ ಮೋದಿ ಮಾತನಾಡಲಿದ್ದಾರೆ.
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ವಿಪಕ್ಷಕ್ಕೆ ಟಾಂಟ್ ನೀಡಿದ್ದು, ಲೋಕಸಭಾ ಚುನಾವಣೆಯಲ್ಲಿ ಜನರು ಕಲಿಸಿದ ಪಾಠವನ್ನು ಅವರು ಮರೆತಿದ್ದಾರೆ. ಅದೇ ರೀತಿ. ಪಾಠವನ್ನು ಅವರು ವಿಧಾನಸಭಾ ಚುನಾವಣೆಯಲ್ಲಿಯೂ ಕಲಿಯಲಿದ್ದಾರೆ ಎಂದು ಹೇಳಿದ್ದಾರೆ.
ಶನಿವಾರ ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ ಮೋದಿ ನಿನ್ನೆ ಬೀಡ್ ಮತ್ತು ಔರಂಗಾಬಾದ್ನಲ್ಲಿ ನಡೆದ ರ್ಯಾಲಿಯಲ್ಲಿ ಭಾಗಿಯಾಗಿದ್ದರು.