ಪ್ರಧಾನ ಸುದ್ದಿ

ರಾಜ್ಯ ಸರ್ಕಾರಕ್ಕೆ ತಲೆ ನೋವಾದ ಜಯಾ, ತಮಿಳುನಾಡಿಗೆ ಶಿಫ್ಟ್?

ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ರಾಜ್ಯ ಸರ್ಕಾರಕ್ಕೆ...

ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಜೈಲು ಪಾಲಾಗಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆ ನೋವಾಗಿದ್ದು, ಅವರನ್ನು ಕರ್ನಾಟಕದಿಂದ ತಮಿಳುನಾಡಿನ ಜೈಲಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಜಯಲಲಿತಾ ಪ್ರಕರಣಕ್ಕೂ ಕರ್ನಾಟಕಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಿದ್ದರೂ ಅಲ್ಲಿನ ಮುಖಂಡರು ಹಾಗೂ ಸಾರ್ವಜನಿಕರು ಅರ್ಥಮಾಡಿಕೊಳ್ಳದೇ ಕನ್ನಡಗರ ಮೇಲೆ ಹಗೆ ಸಾಧಿಸುತ್ತಿರುವುದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಹೀಗಾಗಿ ಸರ್ಕಾರ ಜಯಲಲಿತಾ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತಮಿಳುನಾಡಿಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನ ಹಿರಿಯ ಮುಖಂಡರೊಬ್ಬರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಪ್ರಕರಣ ಅತಿಸೂಕ್ಷ್ಮವಾಗಿದ್ದು, ಕಳೆದ ವಾರವಷ್ಟೇ ಜಾಮೀನು ಅರ್ಜಿ ವಿಚಾರಣೆ ವಿಳಂಬವಾಗುತ್ತಿರುವುದಕ್ಕೆ ನಾವೇ(ಕರ್ನಾಟಕ ಸರ್ಕಾರ) ಕಾರಣ ಎಂದು ಆರೋಪಿಸಿ, ತಮಿಳುನಾಡಿನ ವಕೀಲರು ಮತ್ತು ಎಐಎಡಿಎಂಕೆ ಕಾರ್ಯಕರ್ತರು ನಮ್ಮ ಬಳಿ ಅನುಚಿತವಾಗಿ ವರ್ತಿಸಿದ್ದರು. ಅಲ್ಲದೆ ಪ್ರಕರಣ ರಾಜ್ಯಕ್ಕೆ ವರ್ಗಾವಣೆಯಾದಾಗಿನಿಂದಲೂ ಕನ್ನಡಿಗರ ವಾಹನ ಹಾಗೂ ಆಸ್ತಿಪಾಸ್ತಿಗಳನ್ನು ತಮಿಳರು ಹಾನಿಗೊಳಿಸುತ್ತಿರುವುದಲ್ಲದೇ, ಬೆದರಿಕೆಯ ಬಿತ್ತಿ ಪತ್ರಗಳು ಹಾಗೂ ಬ್ಯಾನರ್‌ಗಳನ್ನು ಪ್ರದರ್ಶಿಸುತ್ತಿದ್ದಾರೆ.

ರಾಜ್ಯ ಸರ್ಕಾರ ಅನಗತ್ಯವಾಗಿ ಕಾನೂನು ಸುವ್ಯವಸ್ಥೆಯ ಸಮಸ್ಯೆಯನ್ನು ಎದುರಿಸುತ್ತಿದ್ದು, ರಾಜ್ಯದಲ್ಲಿ ಅಶಾಂತಿ ಸೃಷ್ಠಿಸುವ ಪ್ರಕರಣಕ್ಕೆ ಸರ್ಕಾರ ಆಸ್ಪದ ಕೊಡಬಾರದು, ಜಯಲಲಿತಾ ಇನ್ನು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿರಬೇಕಾಗಿರುವುದರಿಂದ ಪ್ರಕರಣದಿಂದ ರಾಜ್ಯದ ಜನತೆಗೆ ತೊಂದರೆಯಾಗುವ ಸಾಧ್ಯಯೇ ಹೆಚ್ಚು. ಹೀಗಾಗಿ ಜಯಲಲಿತಾರನ್ನು ತಮಿಳುನಾಡಿಗೆ ವರ್ಗಾಯಿಸುವುದು ಒಳಿತು ಎಂದು ಕಾಂಗ್ರೆಸ್ ಮುಖಂಡರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು ಈ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿರುವ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು, ಜಯಲಲಿತಾ ಅವರ ಸ್ಥಳಾಂತರ ಕುರಿತು ತಮಿಳುನಾಡು ಸರ್ಕಾರದ ಮುಖ್ಯ ಕಾರ್ಯದರ್ಶಿ ಅಥವಾ ಅಲ್ಲಿನ ಪೊಲೀಸ್ ಮಹಾ ನಿರ್ದೇಶಕರು ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದರೆ, ಆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!