ಬೆಳಗಾಂ ಅನ್ನು 'ಬೆಳಗಾವಿ' ಎಂದು ನ. 1ರಂದು ಅಧಿಕೃತ ಘೋಷಣೆ
ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಶುಕ್ರವಾರ ಗಣ್ಯರ ಸಭೆ ಸೇರಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಳಗಾವಿ ನಮ್ಮದೇ ಈ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಹೇಳಿದ್ದಾರೆ.
ವಿಧಾನಸಭೆಯಲ್ಲಿ ಸಭೆ ಸೇರಿದ್ದ ಸಿದ್ದರಾಮಯ್ಯ ಗಣ್ಯರೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದ ಅವರು, ಬೆಳಗಾವಿ ನಮ್ಮದೆ ಇದರಲ್ಲಿ ಯಾವುದೇ ರಾಜಿಯಿಲ್ಲ. ಅಲ್ಲದೆ ಬೆಳಗಾಂ ಜಿಲ್ಲೆಯನ್ನು 'ಬೆಳಗಾವಿ' ಅಂತ ನವಂಬರ್ 1 ರಂದು ಅಧಿಕೃತವಾಗಿ ನಾಮಕರಣ ಮಾಡಲಾಗುವುದು ಎಂದರು.
ಇದೇ ವೇಳೆ ಕನ್ನಡಪರ ಹೋರಾಟಗಾರರ ಬೆನ್ನಿಗೆ ನಿಂತ ಸಿದ್ದರಾಮಯ್ಯ, ಕನ್ನಡಪರ ಹೋರಾಟಗಾರರು ಅನಾಥರಲ್ಲ. ಹೋರಾಟಗಾರರ ಪರ ಸರ್ಕಾರ ಇದ್ದೆ ಇರುತ್ತೆ. ನೆಲ, ಜಲ ವಿಚಾರದಲ್ಲಿ ರಾಜ್ಯದ ಹಿತವನ್ನು ಕಾಪಾಡುವುದು ಸರ್ಕಾರ ಜವಾಬ್ದಾರಿ ಎಂದರು.
ಗಡಿ ವಿವಾದ ಸುಪ್ರೀಂಗೆ ಮರುಪರಿಶೀಲನ ಅರ್ಜಿ
ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ಗೆ ಮರುಪರಿಶೀಲನ ಅರ್ಜಿ ಸಲ್ಲಿಸಲಾಗುವುದು. ಅಲ್ಲದೆ ಮಹಾಜನ್ ಆಯೋಗದ ವರದಿಯನ್ನು ಜಾರಿ ಮಾಡುವಂತೆ ಮನವಿ ಮಾಡಲಾಗುವುದು ಎಂದರು.