ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಹುಡ್‌ಹುಡ್ ಚಂಡಮಾರುತ: ಪ್ರಧಾನಿ ಮೋದಿ ಸಭೆ

ಹುಡ್‌ಹುಡ್ ಚಂಡಮಾರುತದ ತೀವ್ರತೆ ಮತ್ತಷ್ಟು ಹೆಚ್ಚುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಆಂಧ್ರಪ್ರದೇಶ ಮತ್ತು...

Lingaraj Badiger
Updated On : 11 Oct 2014, 4:46 am

ಹೈದರಾಬಾದ್: ಹುಡ್‌ಹುಡ್ ಚಂಡಮಾರುತದ ತೀವ್ರತೆ ಮತ್ತಷ್ಟು ಹೆಚ್ಚುತ್ತಿದ್ದು, ಇನ್ನೇನು ಕೆಲವೇ ಗಂಟೆಗಳಲ್ಲಿ ಆಂಧ್ರಪ್ರದೇಶ ಮತ್ತು ಒಡಿಶಾ ರಾಜ್ಯಗಳಿಗೆ ಅಪ್ಪಳಿಸಲಿದೆ. ಚಂಡಮಾರುತವನ್ನು ಎದುರಿಸಲು ಈಗಾಗಲೇ ಎರಡೂ ರಾಜ್ಯಗಳು ಅಗತ್ಯೆ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಆಂಧ್ರ ಕರಾವಳಿಯಲ್ಲಿ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ.

ಈ ಮಧ್ಯೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಇಂದು ಸಂಜೆ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದು, ಹುಡ್‌ಹುಡ್ ಚಂಡಮಾರುತವನ್ನು ಎದುರಿಸಲು ಎರಡು ರಾಜ್ಯಗಳು ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಲಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಈವರೆಗೆ ವಿಶಾಖಪಟ್ಟಣ ಜಿಲ್ಲೆಯಿಂದ 24 ಸಾವಿರ, ವಿಜಯನಗರಂನಿಂದ 15 ಸಾವಿರ ಹಾಗೂ ಶ್ರೀಕಾಕುಲಂನಿಂದ 46 ಸಾವಿರ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಆಂಧ್ರಪ್ರದೇಶ ವಿಪತ್ತು ನಿರ್ವಹಣಾ ಮಂಡಳಿಯ ಆಯುಕ್ತೆ ಕೆ. ಹೇಮಾವತಿ ಅವರು ತಿಳಿಸಿದ್ದಾರೆ.

ಹುಡ್‌ಹುಡ್ ಚಂಡಮಾರುತ ನಾಳೆ ಆಂಧ್ರ ಕರಾವಳಿಗೆ ಅಪ್ಪಳಿಸಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement