ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬೇಲೇಕೇರಿ ಅದಿರು ನಾಪತ್ತೆ: ವಿವೇಕ್ ಹೆಬ್ಬಾರ್‌ಗೆ ಜಾಮೀನು

Vishwanath S
Updated On : 13 Oct 2014, 3:45 am

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿವೇಕ್ ಹೆಬ್ಬಾರ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಯಲ್ಲಾಪುರದ ಶಾಸಕ ಶಿವರಾಮ್ ಹೆಬ್ಬಾರ್ ಅವರ ಪುತ್ರ ಉದ್ಯಮಿ ವಿವೇಕ್ ಹೆಬ್ಬಾರ್ ಅವರನ್ನು 2013ರ ಡಿಸೆಂಬರ್‌ನಲ್ಲಿ ಬಂಧಿಸಲಾಗಿತ್ತು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ವಿವೇಕ್ ಹೆಬ್ಬಾರ್‌ಗೆ ಬಿಡುಗಡೆ ಭಾಗ್ಯ ಲಭಿಸಿದೆ.

ವಿವೇಕ್ ಹೆಬ್ಬಾರ್ ಹಾಗೂ ಪ್ರಕಾಶ್ ಹೆಗ್ಡೆಗೆ ಈಗಾಗಲೇ ಮತ್ತೊಂದು ಪ್ರಕರಣದಲ್ಲಿ ಜಾಮೀನು ಮಂಜೂರಾಗಿತ್ತು. ವಿವೇಕ್ ಹೆಬ್ಬಾರ್ ಒಡೆತನದ ಡ್ರೀಮ್ಸ್ ಲಾಜಿಸ್ಟಿಕ್ಸ್ ಸಂಸ್ಥೆ 9.16 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರನ್ನು ಬೇಲೇಕೇರಿ ಬಂದಿರನ ಮೂಲಕ ಅಕ್ರಮವಾಗಿ ಸಾಗಿಸಿದ್ದ ಆರೋಪವಿದೆ.

ಜನವರಿ 2009ರಿಂದ ಮೇ 2010ರ ಅವಧಿಯಲ್ಲಿ ನಡೆದ ಈ ಕಾರ್ಯದಲ್ಲಿ ಬಳ್ಳಾರಿಯ ರೆಡ್ಡಿ ಸೋದರರ ಗಣಿಗೆ ಸೇರಿದ ಅದಿರು ಇರುವುದು ಪತ್ತೆಯಾಗಿದೆ. ಈ ಸಾಗಾಣಿಕೆಯ ಜವಾಬ್ದಾರಿಯನ್ನು ಗಾಲಿ ರೆಡ್ಡಿ ಸೋದರರ ಆಪ್ತರಾದ ಸ್ವಸ್ತಿಕ್ ನಾಗರಾಜ್, ಖಾರಪುಡಿ ಮಹೇಶ್ ಅವರು ವಹಿಸಿಕೊಂಡಿದ್ದರು.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮಾಜಿ ಸಚಿವ ಜನಾರ್ದನ ರೆಡ್ಡಿ, ಶಾಸಕರಾದ ಸತೀಶ್ ಸೈಲ್, ನಾಗೇಂದ್ರ, ಸುರೇಶ್‌ಬಾಬು, ಆನಂದ್‌ಸಿಂಗ್ ಸೇರಿದಂತೆ ಒಟ್ಟು 18 ಆರೋಪಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement