ಪೆಟ್ರೋಲ್ ದರದಲ್ಲಿ 1 ರುಪಾಯಿ ಇಳಿಕೆ
ನವದೆಹಲಿ: ದೀಪಾವಳಿಗೂ ಮುನ್ನವೇ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪೆಟ್ರೋಲ್ ಪ್ರತಿ ಲೀಟರ್ಗೆ 1 ರುಪಾಯಿ ಇಳಿಕೆ ಮಾಡಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲದ ಬೆಲೆಯಲ್ಲಿ ಕುಸಿತ ಕಂಡುಬಂದ ಹಿನ್ನೆಲೆಯಲ್ಲಿ ಪೆಟ್ರೋಲ್ ದರವನ್ನು ಇಳಿಕೆ ಮಾಡಿದ್ದು, ಪರಿಷ್ಕೃತ ದರ ಅಕ್ಟೋಬರ್ 15ರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ.