ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮಣಿಪುರ ವಿದ್ಯಾರ್ಥಿಗಳ ಮೇಲೆ ಹಲ್ಲೆ

Vishwanath S
Updated On : 15 Oct 2014, 6:05 am

ಬೆಂಗಳೂರು: ಕನ್ನಡದಲ್ಲಿ ಮಾತನಾಡದ ಮಣಿಪುರ ವಿದ್ಯಾರ್ಥಿ ಸಂಘಟನೆಯ ನಾಯಕನು ಸೇರಿದಂತೆ ಮೂವರ ಮೇಲೆ ಸ್ಥಳೀಯರು ಹಲ್ಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ರಾತ್ರಿ ಸುಮಾರು 10.13ರ ಸುಮಾರಿನಲ್ಲಿ ಕೊತ್ತನೂರು ಬಸ್ ನಿಲ್ದಾಣದ ಬಳಿಯ ರಸ್ತೆ ಬದಿಯಲ್ಲಿ ಆಹಾರ ಮಳಿಗೆಯಲ್ಲಿ ಸಂಘಟನೆಯ ನಾಯಕ ಮೈಕಲ್ ಸೇರಿದಂತೆ ಮೂವರು ಊಟ ಮಾಡುತ್ತಿದ್ದರು. ಈ ವೇಳೆ ಅವರು ಸ್ವಲ್ಪ ಏರು ಧ್ವನಿಯಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಮೂವರು ಕುಡುಕರು ಅವರನ್ನು ಮೆಲ್ಲನೆ ಮಾತನಾಡುವಂತೆ ಹೇಳಿದರು.

ಈ ವೇಳೆ ಮಣಿಪುರ ವಿದ್ಯಾರ್ಥಿಗಳು ಅವರಿಗೆ ಇಂಗ್ಲಿಷ್‌ನಲ್ಲಿ ಉತ್ತರಿಸಿದ್ದಾರೆ. ಇದು ಅರ್ಥವಾಗದೆ ಸ್ಥಳೀಯರು ಕನ್ನಡದಲ್ಲಿ ಮಾತನಾಡುವಂತೆ ತಿಳಿಸಿದ್ದಾರೆ. ಆಗ ವಿದ್ಯಾರ್ಥಿಗಳು ನಿಮ್ಮ ಬಗ್ಗೆ ಮಾತನಾಡುತ್ತಿರಲಿಲ್ಲ ಎಂದು ವಾದಿಸಿದ್ದಾರೆ. ಮಾತಿಗೆ ಮಾತು ಬೆಳೆದು. ಅವರು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಮೈಕಲ್ ದೂರು ನೀಡಿದ್ದಾರೆ.

ಹಲ್ಲೆಗೆ ಸಂಬಂಧಿಸಿ ಜೇಮ್ಸ್ ಕರುಣ್ ಮತ್ತು ಅರುಣ್ ಎನ್ನುವವರನ್ನು ಪೊಲೀಸರು ಬಂಧಿಸಿದ ಬಗ್ಗೆ ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement