ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕಪ್ಪುಹಣ: ಖಾತೆದಾರರ ಹೆಸರು ಬಹಿರಂಗ ಪಡಿಸಲು ಕೇಂದ್ರ ನಕಾರ

ವಿದೇಶದಲ್ಲಿ ಕಪ್ಪುಹಣ ಹೊಂದಿರುವ ಭಾರತೀಯರ ಹೆಸರನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ....

Rashmi Kasaragodu
Updated On : 17 Oct 2014, 1:38 am

ನವದೆಹಲಿ: ವಿದೇಶದಲ್ಲಿ ಕಪ್ಪುಹಣ ಹೊಂದಿರುವ ಭಾರತೀಯರ ಹೆಸರನ್ನು ಬಹಿರಂಗಪಡಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ  ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದೆ.

ಕೇಂದ್ರ ಸಲ್ಲಿಸಿದ ಈ ಅರ್ಜಿಯ ವಿಚಾರಣೆ ಅಕ್ಟೋಬರ್ 28ಕ್ಕೆ ನಡೆಯಲಿದೆ.

ಕಪ್ಪು ಹಣ ಪ್ರಕರಣದಲ್ಲಿ ಭಾಗಿಯಾಗಿರುವವರ ಹೆಸರನ್ನು ಅದರ ವಿಚಾರಣೆಯ ಪ್ರಕ್ರಿಯೆಗಳು ಆರಂಭವಾಗುವ ಮುನ್ನ ಬಹಿರಂಗಗೊಳಿಸಲಾಗುವುದಿಲ್ಲ. ಗೌಪ್ಯತೆಗೆ ಸರ್ಕಾರ ಬದ್ಧವಾಗಿದ್ದು ಮತ್ತು ಗೌಪ್ಯತೆಯನ್ನು ಕಾಯ್ದುಕೊಳ್ಳಬೇಕಾಗಿರುವುದು ಅನಿವಾರ್ಯವಾಗಿರುವುದರಿಂದ ಖಾತೆದಾರರ ಹೆಸರನ್ನು ಬಹಿರಂಗ ಪಡಿಸಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಅರ್ಜಿಯಲ್ಲಿ ಹೇಳಿದೆ.

ಆದಾಗ್ಯೂ, ಆದಾಯ ಮತ್ತು ತೆರಿಗೆ ಇಲಾಖೆಯ ಉನ್ನತ  ಮಟ್ಟದ ಅಧಿಕಾರಿಗಳ ತಂಡ ಶೀಘ್ರದಲ್ಲೇ ಸ್ವಿಜರ್‌ಲ್ಯಾಂಡ್‌ಗೆ ಪ್ರಯಾಣ ಬೆಳೆಸಲಿದ್ದು, ಅಲ್ಲಿನ ಬ್ಯಾಂಕ್‌ಗಳಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣದ  ಬಗ್ಗೆ ಮಾಹಿತಿಯನ್ನು ಕಲೆ ಹಾಕಲಿದ್ದಾರೆ.

ಪ್ರಸ್ತುತ ಅಧಿಕಾರಿಗಳ ತಂಡದ ನೇತೃತ್ವವನ್ನು ಆದಾಯ ಇಲಾಖೆ ಕಾರ್ಯದರ್ಶಿ ಶಕ್ತಿಕಾಂತ ದಾಸ್ ವಹಿಸಲಿದ್ದು, ಸಿಟಿಬಿಟಿ ಚೇರ್‌ಮೆನ್ ಕೆ.ವಿ ಚೌಧರಿ ಮತ್ತು ವಿತ್ತ ಸಚಿವಾಲಯದ ವಿದೇಶಿ ತೆರಿಗೆ ವಿಭಾಗದ ಇಬ್ಬರು ಅಧಿಕಾರಿಗಳು ತಂಡದಲ್ಲಿರಲಿದ್ದಾರೆ.

ಮುಂದಿನ ದಿನಗಳಲ್ಲಿ ಕಪ್ಪುಹಣ ವಾಪಸಾತಿಗಾಗಿ ಉಭಯ ರಾಷ್ಟ್ರಗಳ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆಗೆ ಪ್ರಧಾನಿ ಮೋದಿ ಹೆಚ್ಚಿನ ಪ್ರಾಧಾನ್ಯತೆ ನೀಡಲಿದ್ದಾರೆ. ಚುನಾವಣಾ ಪ್ರಣಾಳಿಕೆಯಲ್ಲಿ ತಾವು ಅಧಿಕಾರಕ್ಕೆ ಬಂದರೆ ಕಪ್ಪು ಹಣವನ್ನು ವಾಪಸ್ ತರುವುದಾಗಿ ಭರವಸೆ ನೀಡಿರುವುದರಿಂದ ಪ್ರಧಾನಿ ಮೋದಿ ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿದ್ದಾರೆ.


ಕಪ್ಪುಹಣ ಪ್ರಕರಣದಲ್ಲಿ ವ್ಯಕ್ತಿಗಳ ಹೆಸರನ್ನು ಬಹಿರಂಗ ಪಡಿಸಲು ನಿರಾಕರಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಕಪ್ಪುಹಣ ಹೊಂದಿರುವ ಖಾತೆದಾರರನ್ನು ರಕ್ಷಿಸುತ್ತಿದೆ.
-ಖ್ಯಾತ ನ್ಯಾಯವಾದಿ ರಾಮ್ ಜೇಠ್ಮಲಾನಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement