ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಪಟ್ಟಿ ಕೊಟ್ಟರೆ ಒಂದೇ ದಿನದಲ್ಲಿ ಪಟ್ಟ ಗ್ಯಾರಂಟಿ

Vishwanath S
Updated On : 17 Oct 2014, 10:53 am

ಬೆಂಗಳೂರು: ನಿಗಮ-ಮಂಡಳಿಗಳಿಗೆ ನೇಮಕ ಪ್ರಕ್ರಿಯೆಯನ್ನು ಈ ಮಾಸಾಂತ್ಯದಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚನೆ ನೀಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್, ನೀವು ಪಟ್ಟಿ ಕೊಟ್ಟರೆ ಹೈಕಮಾಂಡ್ ಒಂದೇ ದಿನದಲ್ಲಿ ಒಪ್ಪಿಗೆ ನೀಡುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ ಅವರಿಗೆ ಈ ಸೂಚನೆ ನೀಡಿರುವ ಅವರು, ಕಾರ್ಯಕರ್ತರ ತಾಳ್ಮೆ ಪರೀಕ್ಷೆ ಮಾಡಬೇಡಿ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಒಂದೆಡೆ ನೇಮಕ ಪ್ರಕ್ರಿಯೆ ಬೇಗ ಮುಗಿಸುವಂತೆ ಸೂಚನೆ ನೀಡಿರುವ ದಿಗ್ವಿಜಯ್ ಸಿಂಗ್ ಇನ್ನೊಂದೆಡೆ ಶಾಸಕರು, ಮಾಜಿ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ನಿಗಮ-ಮಂಡಳಿ ಅಧ್ಯಕ್ಷ ಗಾದಿಯ ಕನಸನ್ನೂ ನಚ್ಚುನೂರುಗೊಳಿಸಿದ್ದಾರೆ.

ಶಾಸಕ ಸ್ಥಾನವೇ ಒಂದು ಹುದ್ದೆ. ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವುದೇ ದೊಡ್ಡ ಅವಕಾಶ. ಅವರಿಗೆ ಇಷ್ಟು ಸಾಲದೇ ಎಂದು ಉಭಯ ನಾಯಕರನ್ನು ಪ್ರಶ್ನಿಸಿರುವ ದಿಗ್ವಿಜಯ್ ಸಿಂಗ್, ಕಾರ್ಯಕರ್ತರು, ಮುಖಂಡರು, ಮಹಿಳೆಯರು ಮತ್ತು ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ತಾಕೀತು ಮಾಡಿದ್ದಾರೆ. ಶಾಸಕರು, ಮಾಜಿ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳನ್ನು ನಿಗಮ-ಮಂಡಳಿ ನೇಮಕ ಸಂದರ್ಭದಲ್ಲಿ ಪರಿಗಣಿಸಬೇಡಿ ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement