ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಮಹಾ 'ಸಮ್ಮಿಶ್ರ 'ಸರ್ಕಾರಕ್ಕೆ ಶಿವಸೇನೆ ಜೈ ?

ಮಹಾರಾಷ್ಟದಲ್ಲಿ ಬಿಜೆಪಿ ಜತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಕೊಂಡಿದೆ ಎಂದು ಬಲ್ಲಮೂಲಗಳು...

Rashmi Kasaragodu
Updated On : 20 Oct 2014, 1:56 am

ಮುಂಬೈ: ಮಹಾರಾಷ್ಟದಲ್ಲಿ ಬಿಜೆಪಿ ಜತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಲು ಶಿವಸೇನೆ ಒಪ್ಪಿಕೊಂಡಿದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.

ಮೂಲಗಳ ಪ್ರಕಾರ ಉಭಯ ಪಕ್ಷಗಳ ರಾಜ್ಯ ನಾಯಕರು ಸೋಮವಾರ ಬೆಳಗ್ಗೆ ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದ್ದಾರೆ. ಪ್ರಸ್ತುತ ಸಭೆಯಲ್ಲಿ ಶಿವಸೇನೆ ಬಿಜೆಪಿಗೆ ಬೆಂಬಲ ನೀಡುವುದಾಗಿ ಹೇಳಿದೆ ಎಂದು ಹೇಳಲಾಗುತ್ತಿದೆ.

ಈ ವಿಚಾರವಾಗಿ ಹಂತ ಹಂತವಾಗಿ ಮಾತುಕತೆ ನಡೆದು ಬರುತ್ತಿದ್ದು, ಇನ್ನು ಕೆಲವೇ ಗಂಟೆಗಳಲ್ಲಿ ಅಧಿಕೃತ ಘೋಷಣೆ ಹೊರಡಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ.

ಇದೀಗ ಶಿವಸೇನೆಯ ಮುಖ್ಯಸ್ಥ ಉದ್ದವ್ ಠಾಕ್ರೆ  ಸೇನಾ ಭವನದಲ್ಲಿ ಶಿವಸೇನಾ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದಾರೆ. ಈ ಸಭೆ ಮುಗಿದ ನಂತರ ಬಿಜೆಪಿಗೆ ಬೆಂಬಲ ನೀಡುವ ಬಗ್ಗೆ ಅಧಿಕೃತ ಘೋಷಣೆಯನ್ನು ಮಾಡಲಾಗುವುದು.

ಅದೇ ವೇಳೆ ಈ ಸಭೆಯಲ್ಲಿಯೇ ಶಿವಸೇನೆ ತಮ್ಮ ಶಾಸಕರ ನಾಯಕನನ್ನೂ ಆಯ್ಕೆ ಮಾಡಲಿದೆ.

ಬಿಜೆಪಿಯಲ್ಲಿ ಸರ್ಕಾರ ರಚಿಸುವುದಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ರಾಜ್‌ನಾಥ್ ಸಿಂಗ್ ಮತ್ತು ಹಿರಿಯ ನಾಯಕ ಜೆ .ಪಿ ನದ್ದಾ ಇಂದು ಮುಂಬೈಗೆ ಭೇಟಿ ನೀಡಬೇಕಾಗಿತ್ತು. ಆದರೆ ಈ ಭೇಟೆಯನ್ನು ನಾಳೆಗೆ ಮುಂದೂಡಲಾಗಿದೆ.

ಈ ಚುನಾವಣೆಯಲ್ಲಿ 41 ಸೀಟುಗಳನ್ನು ಗೆದ್ದಿರುವ ಎನ್‌ಸಿಪಿ, ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡುವುದಾಗಿ ನಿನ್ನೆ ಹೇಳಿತ್ತು. ಆದರೆ ಎನ್‌ಸಿಪಿ ಜತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರಾಕರಿಸಿತ್ತು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement