ಆರೋಗ್ಯ ಸಚಿವರೇ, ಖಾಲಿ ಹುದ್ದೆ ಭರ್ತಿ ಮಾಡಿಕೊಳ್ಳಿ: ಸ್ಪೀಕರ್
ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ದಾದಿಯರ ಕೊರತೆ ಎದ್ದು ಕಾಣುತ್ತಿದ್ದು, ಈ ವಿಚಾರವಾಗಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಆರೋಗ್ಯ ಸಚಿವರನ್ನು ತೆಗೆದುಕೊಂಡಿದ್ದಾರೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನಿಮಗೇನು ತೊಂದರೆ ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಸ್ಪೀಕರ್ ಕಾಗೋಡು ತಿಮ್ಮಪ್ಪ ಸರ್ಕಾರದ ಮೇಲೆ ಮತ್ತೊಮ್ಮೆ ಚಾಟಿ ಬೀಸಿದ್ದಾರೆ.
ಖಾಲಿ ಹುದ್ದೆ ಭರ್ತಿ ಮಾಡಿಕೊಳ್ಳಲು ನಿಮಗೇನು ದಾಢಿ. ಡಾಕ್ಟರ್‌ಗಳು ಮತ್ತು ನರ್ಸ್‌ಗಳಿಲ್ಲದೆ ರಾಜ್ಯಾದ್ಯಂತ ಜನ ತೊಂದರೆ ಪಡುತ್ತಿದ್ದಾರೆ. ಇದು ನಿಮ್ಮ ಕಣ್ಣಿಗೆ ಬಿದ್ದಿಲ್ಲವೇ? ಮೊದಲು ಹುದ್ದೆ ಭರ್ತಿಗೆ ಕ್ರಮ ತೆಗೆದುಕೊಳ್ಳಿ ಎಂದು ಕಾಗೋಡು ತಿಮ್ಮಪ್ಪ ಅವರು ಆರೋಗ್ಯ ಸಚಿವ ಯು.ಟಿ ಖಾದರ್ ಅವರನ್ನು ಗುರುವಾರ ತರಾಟೆಗೆ ತೆಗೆದುಕೊಂಡರು.
ರಾಜ್ಯದೆಲ್ಲಡೆ ವೈದ್ಯರು ಮತ್ತು ದಾದಿಯರ ಕೊರತೆಯಿದೆ ಇದರಿಂದಾಗಿ ರೋಗಿಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಸ್ಪೀಕರ್ ತಿಪ್ಪಮ್ಮ ಅವರು ಖಾದರ್ ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.
ನಂತರ ಮಾತನಾಡಿದ ಸಚಿವ ಖಾದರ್, ನೇಮಕ ವಿಳಂಬ ಹಾಗೂ ವಾಸ್ತವ ಸ್ಥಿತಿಗತಿ ಬಗ್ಗೆ ಸ್ಪೀಕರ್ ಗಮನಕ್ಕೆ ತಂದಿದ್ದೇನೆ. ಅಲ್ಲದೆ ಹಣಕಾಸು ಇಲಾಖೆ ಮತ್ತು ಆರೋಗ್ಯ ಇಲಾಖೆ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ವದಂತಿಗಳಿಗೆ ಕಿವಿಕೊಡಬೇಡಿ ಎಂದರು.