ಹುದ್ದೆಯಿಂದ ರಶ್ಮಿ ಮಹೇಶ್ ಮುಕ್ತ
ಬೆಂಗಳೂರು: ಮೈಸೂರು ಪ್ರಾದೇಶಿಕ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ಹೊಂದಿದ್ದ ರಶ್ಮಿ ಮಹೇಶ್ ಅವರನ್ನು ಆ ಹುದ್ದೆಯಿಂದ ಮುಕ್ತಗೊಳಿಸಿ, ಚಾಮರಾಜನಗರ ಜಿಲ್ಲಾಧಿಕಾರಿಯಾಗಿರುವ ಎಂ.ಎಂ.ಕುಂಜಪ್ಪ ಅವರಿಗೆ ಈ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಎಸ್.ಎಸ್.ಪಟ್ಟಣಶೆಟ್ಟಿ ಅವರನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ. ಆಯುಕ್ತರ ಹುದ್ದೆಯಲ್ಲಿದ್ದ ಡಾ.ಆರ್.ವಿಶಾಲ್ ಅವರನ್ನು ಉಡುಪಿ ಜಿಲ್ಲಾಧಿಕಾರಿ ಹುದ್ದೆಗೆ ವರ್ಗಾಯಿಸಲಾಗಿದೆ.