ಕೇಂಬ್ರಿಡ್ಜ್ ಶಾಲೆಯಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿ ಜೈಶಂಕರ್ಗೆ ವೈದ್ಯಕೀಯ ಪರೀಕ್ಷೆ
ಕೇಂಬ್ರಿಡ್ಜ್ ಶಾಲೆಯ ಆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಿಂದಿ ಶಿಕ್ಷಕ ಜೈಶಂಕರ್ನನ್ನು...
ಬೆಂಗಳೂರು: ಕೇಂಬ್ರಿಡ್ಜ್ ಶಾಲೆಯ ಆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಿಂದಿ ಶಿಕ್ಷಕ ಜೈಶಂಕರ್ನನ್ನು ಪೊಲೀಸರು ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.
ಇಂದಿರಾನಗರದಲ್ಲಿರುವ ಕೇಂಬ್ರಿಡ್ಜ್ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಜೈಶಂಕರ್ನನ್ನು ವಶಕ್ಕೆ ಪಡೆದಿರುವ ಪೊಲೀಸರು, ಇಂದು ಆರೋಪಿಯನ್ನು ಸಿವಿ ರಾಮನಗರ ಆಸ್ಪತ್ರೆಯಲ್ಲಿ ಸಾಮಾನ್ಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.
ಜೈಶಂಕರ್ ವಿರುದ್ಧ ಐಪಿಸಿ ಕಲಂ 376(ಅತ್ಯಾಚಾರ) ಹಾಗೂ ಪೋಕ್ಸೋ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲಕಿ ನೀಡಿದ ಸುಳಿವಿನ ಮೇಲೆ ಶಾಲೆಯ ದೈಹಿಕ ಶಿಕ್ಷಕ ಜೈಶಂಕರ್(38) ನನ್ನು ಗುರುವಾರ ರಾತ್ರಿ ಬಂಧಿಸಿದ್ದರು.
ಇನ್ನು ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯವನ್ನು ಖಂಡಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕಾರ್ಯಕರ್ತರು ಶಾಲೆಯ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಶಾಲಾ ಆಡಳಿತ ಮಂಡಳಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.