ಚೆನ್ನೈ ಸೆಂಟ್ರಲ್ ರೇಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ
ಚೆನ್ನೈ ಸೆಂಟ್ರಲ್ ರೇಲ್ವೆ ನಿಲ್ದಾಣಕ್ಕೆ ಗುರುವಾರ ಬಾಂಬ್ ಬೆದರಿಕೆ ಕರೆ ಬಂದಿದೆ...
ಚೆನ್ನೈ: ಚೆನ್ನೈ ಸೆಂಟ್ರಲ್ ರೇಲ್ವೆ ನಿಲ್ದಾಣಕ್ಕೆ ಗುರುವಾರ ಬಾಂಬ್ ಬೆದರಿಕೆ ಕರೆ ಬಂದಿದೆ.
ಈ ಹಿನ್ನೆಲೆಯಲ್ಲಿ ರೇಲ್ವೆ ನಿಲ್ದಾಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, ಮುಂಜಾಗ್ರತೆ ಕ್ರಮಕೈಗೊಳ್ಳಲಾಗಿದೆ.
ಮುಂಜಾಗ್ರತೆಯಿಂದ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಲ್ಲಾ ಪ್ರಯಾಣಿಕರ ಲಗೇಜ್ಗಳ ಶೋಧ ನಡೆಸುತ್ತಿದ್ದು, ರೇಲ್ವೆ ನಿಲ್ದಾಣದಾದ್ಯಂತ ಶ್ವಾನ ದಳದಿಂದ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.