ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

'ಶ್ರೀರಾಮ ಸೇನೆ' ನಿಷೇಧಕ್ಕೆ ಸರ್ಕಾರ ಚಿಂತನೆ

ಪ್ರಮೋದ್ ಮುತಾಲಿಕ್ ನೇತೃತ್ವದ ಹಿಂದೂಪರ ಸಂಘಟನೆ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ...

Lingaraj Badiger
Updated On : 12 Sept 2014, 5:06 am

ಬೆಳಗಾವಿ: ಪ್ರಮೋದ್ ಮುತಾಲಿಕ್ ನೇತೃತ್ವದ ಹಿಂದೂಪರ ಸಂಘಟನೆ 'ಶ್ರೀರಾಮ ಸೇನೆ'ಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಗೋವಾ ಸರ್ಕಾರ ಶ್ರೀರಾಮ ಸೇನೆ ಸಂಘಟನೆಗೆ ನಿಷೇಧ ಹೇರಿದೆ. ಅದೇ ರೀತಿ ರಾಜ್ಯದಲ್ಲೂ ಶ್ರೀರಾಮ ಸೇನೆ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದರು.

ಶ್ರೀರಾಮ ಸೇನೆ ಹಲವು ಬಾರಿ ಧರ್ಮದ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಂಡಿದ್ದು, ಇದಕ್ಕೆ ಕಡಿವಾಣ ಹಾಕಲು ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement