ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕಾರ್ತಿಕ್ ಗೌಡ ವಿಚಾರಣೆಗೆ ಹಾಜರು

ನಟಿ ಮೈತ್ರಿಯಾ ಗೌಡಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕೇಂದ್ರ ಸಚಿವ ಸದಾನಂದಗೌಡ ಪುತ್ರ...

Vishwanath S
Updated On : 12 Sept 2014, 12:13 pm

ಬೆಂಗಳೂರು: ನಟಿ ಮೈತ್ರಿಯಾ ಗೌಡಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಕೇಂದ್ರ ಸಚಿವ ಸದಾನಂದಗೌಡ ಪುತ್ರ ಕಾರ್ತಿಕ್ ಗೌಡ ಶುಕ್ರವಾರ ಬೆಳಗ್ಗೆ ಪೊಲೀಸರ ಮುಂದೆ ಹಾಜರಾಗಿದ್ದಾರೆ.

ನಟಿ ಮೈತ್ರಿಯಾ ಗೌಡ ಪ್ರಕರಣ ಜಗ ಜಾಹೀರಾದ ಬಳಿಕ ತಲೆಮರೆಸಿಕೊಂಡಿದ್ದ ಕಾರ್ತಿಕ್‌ಗೌಡ ಇಂದು ಬೆಳಗ್ಗೆ 6.15ರ ಸುಮಾರಿನಲ್ಲಿ ಆರ್.ಟಿ ನಗರ ಪೊಲೀಸ್ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದರು.

ಪ್ರಕರಣದ ತನಿಖೆ ನಡೆಸುತ್ತಿರುವ ಎಸಿಪಿ ಓಂಕಾರಯ್ಯ ನೇತೃತ್ವದ ತಂಡ ಕಾರ್ತಿಕ್ ಗೌಡನನ್ನು ಸುಮಾರು 30 ನಿಮಿಷಗಳ ಕಾಲ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.

ವಿಚಾರಣೆ ಬಳಿಕ ವೈದ್ಯಕೀಯ ಪರೀಕ್ಷೆಗಾಗಿ ಕಾರ್ತಿಕ್ ಗೌಡನನ್ನು ಅಂಬೇಡ್ಕರ್ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ಪೊಲೀಸರು  ಕರೆದುಕೊಂಡು ಹೋಗಿದ್ದಾರೆ.

ಪ್ರಕರಣ ಸಂಬಂಧ ಬೆಂಗಳೂರಿನ ಸೆಷನ್ಸ್ ಕೋರ್ಟ್ ಸೋಮವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಅಲ್ಲದೆ ಪೊಲೀಸರ ವಿಚಾರಣೆಗೆ ಸಂಪೂರ್ಣವಾಗಿ ಸಹಕರಿಸಬೇಕೆಂದು ನ್ಯಾಯಾಲಯ ಷರತ್ತು ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಕಾರ್ತಿಕ್‌ಗೌಡ ಇಂದು ಪ್ರಕರಣದ ತನಿಖಾಧಿಕಾರಿ ಓಂಕಾರಯ್ಯನವರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಆಗಸ್ಟ್ 30ರಂದು ನಟಿ ಮೈತ್ರಿಯಾ ಗೌಡ ಕಾರ್ತಿಕ್‌ಗೌಡ ವಿರುದ್ಧ ವಂಚನೆ ಮತ್ತು ಅತ್ಯಾಚಾರದ ಆರೋಪ ಹೊರಿಸಿ ಆರ್.ಟಿ. ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದೇ ದಿನ ಮಡಿಕೇರಿಯಲ್ಲಿ ಕುಶಾಲನಗರದ ಉದ್ಯಮಿ ನಾಣಯ್ಯ ಎಂಬವರ ಪುತ್ರಿ ರಾಜಶ್ರೀ (ಸ್ವಾತಿ) ಅವರೊಂದಿಗೆ  ಕಾರ್ತಿಕ್‌ಗೌಡರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿತ್ತು. ಪ್ರಕರಣ ಬೆಳಕಿಗೆ ಬಂದ ಮರುದಿನದಿಂದ ಕಾರ್ತಿಕ್‌ಗೌಡ ನಾಪತ್ತೆಯಾಗಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement