ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಕೆಎಂಎಫ್ ನೂತನ ಅಧ್ಯಕ್ಷ ಎಂ.ಪಿ ರವೀಂದ್ರ?

Vishwanath S
Updated On : 15 Sept 2014, 8:08 am

ಬೆಂಗಳೂರು: ಕೆಎಂಎಫ್‌ನ ನೂತನ ಅಧ್ಯಕ್ಷರಾಗಿ ಮಾಜಿ ಡಿಸಿಎಂ ದಿ. ಎಂ.ಪಿ ಪ್ರಕಾಶ್ ಪುತ್ರ ಹರಪನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ಪಿ. ರವೀಂದ್ರ ಆಯ್ಕೆಯಾಗುವ ಬಹುತೇಕ ಸಾಧ್ಯತೆಗಳಿವೆ.

ಕೆಎಂಎಫ್ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಹಕಾರಿ ಸಚಿವ ಹೆಚ್.ಎಸ್ ಮಹದೇವ ಪ್ರಸಾದ್ ನಿವಾಸದಲ್ಲಿ ಸಭೆ ನಡೆದಿದ್ದು, ಸಚಿವರಾದ ಡಿ.ಕೆ ಶಿವಕುಮಾರ್, ಟಿ.ಬಿ ಜಯಚಂದ್ರ ಹಾಗೂ ರಾಮಲಿಂಗಾರೆಡ್ಡಿ ಅವರು ಭಾಗವಹಿಸಿದ್ದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಹದೇವ ಪ್ರಸಾದ್, ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಎಂ. ಪಿ ರವೀಂದ್ರ ಹಾಗೂ ಪಿ. ನಾಗರಾಜ್ ಇಬ್ಬರು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಯಾವುದೇ ಗೊಂದಲ ಇಲ್ಲದೆ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು. ನೂತನ ಅಧ್ಯಕ್ಷರ ಹೆಸರನ್ನು ಸೆ. 17ಕ್ಕೆ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಒಟ್ಟು 13 ಹಾಲು ಒಕ್ಕೂಟಗಳಿವೆ ಅವುಗಳ ಪೈಕಿ 11ರಲ್ಲಿ ಕಾಂಗ್ರೆಸ್ ನಿರ್ದೇಶಕರಿದ್ದಾರೆ ಅವರ ಅಭಿಪ್ರಾಯಗಳನ್ನು ಈಗಾಗಲೇ ಸಂಗ್ರಹಿಸಲಾಗಿದೆ ಎಂದರು.

ಸದ್ಯ ಹಾಲಿ ಅಧ್ಯಕ್ಷರಾಗಿರುವ ಸೋಮಶೇಖರರೆಡ್ಡಿ ಅವರ ಅವಧಿ ಜುಲೈ 15ಕ್ಕೆ ಅಂತ್ಯವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement