ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ರಾಜ್ಯಕ್ಕೆ ಪ್ರಧಾನಿ ಮೋದಿ ಮೊದಲ ಭೇಟಿ

ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ ಮಂಗಳವಾರ ಸಂಜೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ...

Mainashree
Updated On : 23 Sept 2014, 1:02 am

ಬೆಂಗಳೂರು: ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ ಮಂಗಳವಾರ ಸಂಜೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.

ಸಂಜೆ 5.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದು, ರಾಜ್ಯ ಬಿಜೆಪಿಯ 30 ಮುಖಂಡರು ಸ್ವಾಗತಿಸಲಿದ್ದಾರೆ.

ಇದಾದ ಬಳಿಕ ಸಂಜೆ 6 ಗಂಟೆಗೆ ವಿಮಾನ ನಿಲ್ದಾಣದ ಹೊರಗೆ ಅರ್ಧ ಗಂಟೆಗಳ ಕಾರ್ಯಕ್ರಮ ನಡೆಯಲಿದೆ.

ಕೇಂದ್ರ ಸಚಿವರಾದ ಡಿ.ವಿ ಸದಾನಂದಗೌಡ, ಅನಂತ್‌ಕುಮಾರ್, ಜಿ.ಎಂ ಸಿದ್ದೇಶ್ವರ, ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಮೋದಿಯನ್ನು ಸನ್ಮಾನಿಸಲಾಗುತ್ತದೆ. ರಾಜಭವನದಲ್ಲಿಯೇ ಮೋದಿ ರಾತ್ರಿ ತಂಗಲಿದ್ದಾರೆ.

ಬೆಳಗ್ಗೆ 6 ಗಂಟೆ ಸುಮಾರಿಗೆ ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿ ಮಂಗಳ ನೌಕೆಯು ಮಂಗಳ ಕಕ್ಷೆಗೆ ಸೇರುವ ಅಂತಿಮ ಕ್ಷಣಕ್ಕೆ ಸಾಕ್ಷಿಯಾಗಲಿದ್ದಾರೆ. ಆ ಬಳಿಕ ತುಮಕೂರಿನಲ್ಲಿ ಫುಡ್‌ಪಾರ್ಕ್‌ಗೆ ತೆರಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement