ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಅಸ್ಸಾಂ: ಪ್ರವಾಹಕ್ಕೆ 32 ಬಲಿ

ಅಸ್ಸಾಂನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 16 ಮೃತ ಶರೀರಗಳನ್ನು ಪತ್ತೆ ಹಚ್ಚಿದ್ದು, ಇದೀಗ ಪ್ರವಾಹಕ್ಕೆ ಸಿಲುಕಿ....

Rashmi Kasaragodu
Updated On : 25 Sept 2014, 12:34 pm

ಗುವಾಹಟಿ: ಅಸ್ಸಾಂನ ಪ್ರವಾಹ ಪೀಡಿತ ಪ್ರದೇಶಗಳಲ್ಲಿ 16 ಮೃತ ಶರೀರಗಳನ್ನು ಪತ್ತೆ ಹಚ್ಚಿದ್ದು, ಇದೀಗ ಪ್ರವಾಹಕ್ಕೆ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೇರಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸೇನೆ ಮತ್ತು ವಿಪತ್ತು ನಿರ್ವಹಣಾ ತಂಡ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಂದ ನೂರರಷ್ಟು ಜನರನ್ನು ಸುರುಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.
ಮಂಗಳವಾರದ ನಂತರ ಪ್ರಸ್ತುತ ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು  13 ಜಿಲ್ಲೆಗಳಲ್ಲಿ ಒಟ್ಟು 8.4 ಲಕ್ಷ ನೆರೆ ಸಂತ್ರಸ್ತರು ಇದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ಹೇಳಿದೆ.

ಗುರುವಾರ ಗೋಲ್‌ಪಾರಾ ಜಿಲ್ಲೆಯ ಬೋಲ್‌ಬೋಲಾ ಮತ್ತು ಕೃಷ್ಣೈ ಪ್ರದೇಶಗಳಿಂದ 6 ಮೃತ ಶರೀರಗಳನ್ನು ಪತ್ತೆ ಹಚ್ಚಲಾಗಿತ್ತು.

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ರಾಜ್ಯಾದ್ಯಂತ 162 ಪರಿಹಾರ ಶಿಬಿರಗಳನ್ನು ತೆರೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement