ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಬಿಜೆಪಿ-ಶಿವಸೇನೆಯ 25 ವರ್ಷಗಳ ಮೈತ್ರಿಗೆ ತಿಲಾಂಜಲಿ

Vishwanath S
Updated On : 25 Sept 2014, 4:54 am

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆಯಲ್ಲಿ ಬಿಜೆಪಿ-ಶಿವಸೇನೆ ನಡುವೆ ಒಮ್ಮುತ ಮೂಡದ ಹಿನ್ನಲೆಯಲ್ಲಿ 25 ವರ್ಷಗಳ ಹಳೆಯ ದೋಸ್ತಿಯನ್ನು ಕಳೆದುಕೊಳ್ಳಲು ಬಿಜೆಪಿ ತೀರ್ಮಾನಿಸಿದೆ.

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 25 ವರ್ಷಗಳ ಹಳೆಯ ಪ್ರಬಲ ದೋಸ್ತಿಯನ್ನೇ ಮುರಿದು ಹಾಕಿದೆ. ಸೀಟು ಹಂಚಿಕೆಯಲ್ಲಿ ಉಭಯ ಪಕ್ಷಗಳ ನಡುವೆ ಒಮ್ಮತ ಮೂಡದೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಿಜೆಪಿ ತೀರ್ಮಾನಿಸಿದ್ದು, ಅಧಿಕೃತ ಘೋಷಣೆಯೊಂದು ಬಾಕಿ ಇದೆ ಎಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ.

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ 135 ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಹೇಳಿತ್ತು. ಮುಖ್ಯಮಂತ್ರಿಯ ಕನಸು ಕಾಣುತ್ತಿರುವ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಈ ಬೇಡಿಕೆಯನ್ನು ತಿರಸ್ಕರಿಸಿದ್ದು, ಬಿಜೆಪಿ 119 ಸ್ಥಾನಗಳಲ್ಲಿ ಸ್ಪರ್ಧಿಸಲು ಹೇಳಿತ್ತು. ಹೀಗಾಗಿ ಮಿತ್ರಪಕ್ಷಗಳ ನಡುವಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿತ್ತು. ಇದೀಗ ಸೀಟು ಹಂಚಿಕೆ ವಿವಾದ ಕೊನೆಯ ಹಂತಕ್ಕೆ ತಲುಪಿದ್ದು, 25 ವರ್ಷದ ಮೈತ್ರಿ ಮುರಿದುಕೊಳ್ಳಲು ಬಿಜೆಪಿ ತೀರ್ಮಾನಿಸಿದೆ.

288 ಸ್ಥಾನಗಳನ್ನು ಹೊಂದಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನೆರಡು ದಿನಗಳು ಮಾತ್ರ ಬಾಕಿ ಇರುವ ಹಿನ್ನೆಲೆಯಲ್ಲಿ ಬಿಜೆಪಿ ಈ ತೀರ್ಮಾನಕ್ಕೆ ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement