ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ದಸರಾ ಕೊಡುಗೆ: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಶೇ. 4.25ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವುದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ...

Vishwanath S
Updated On : 26 Sept 2014, 4:10 am

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ. 4.25ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವುದರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಸರಾ ಹಬ್ಬದ ಕೊಡುಗೆ ನೀಡಿದ್ದಾರೆ.

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ತನ್ನ ನೌಕರರಿಗೆ ಶೇ. 7ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ನೌಕರರ ತುಟ್ಟಿಭತ್ಯೆ ಜುಲೈ 1 ರಿಂದಲೇ ಪೂರ್ವಾನ್ವಯವಾಗುವಂತೆ ಮಾಡುವ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಗೌರಿ ಗಣೇಶ್ ಹಬ್ಬದ ಕೊಡುಗೆ ನೀಡಿತ್ತು.

ಹಣಕಾಸು ಖಾತೆ ಹೊಂದಿರುವ ಸಿದ್ದರಾಮಯ್ಯ ತುಟ್ಟಿಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿ ಮಂಜೂರಾತಿ ನೀಡಿದ್ದಾರೆ. ಮೂಲವೇತನದ ಶೇ. 4.25ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿದ್ದು, ಇದು ಜುಲೈ 1ರಿಂದಲೇ ಅನ್ವಯವಾಗಲಿದೆ. ಈ ಕೊಡುಗೆ ಸುಮಾರು 6 ಲಕ್ಷ ಸರ್ಕಾರಿ ನೌಕರರಿಗೆ ಮತ್ತು ಅಧಿಕಾರಿಗಳಿಗೆ ಅನುಕೂಲವಾಗಲಿದೆ. ತುಟ್ಟಿಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಅಂದಾಜು 660 ಕೋಟಿ ರುಪಾಯಿ ಹೆಚ್ಚಿಗೆ ಹೊರೆಯಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement