ಶರೀಫ್ ಆರೋಪ ತಳ್ಳಿ ಹಾಕಿದ ಭಾರತ
ಶುಕ್ರವಾರ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಜ್ ಶರೀಫ್ ಕಾಶ್ಮೀರ ವಿಚಾರ ...
ನ್ಯೂಯಾರ್ಕ್: ಶುಕ್ರವಾರ ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಪಾಕಿಸ್ತಾನದ ಪ್ರಧಾನ ಮಂತ್ರಿ ನವಾಜ್ ಶರೀಫ್ ಕಾಶ್ಮೀರ ವಿಚಾರ ಪ್ರಸ್ತಾಪಿಸಿರುವುದರ ಜತೆಗೆ ಎರಡೂ ದೇಶಗಳ ನಡುವಿನ ಮಾತುಕತೆ ಮುರಿದು ಬೀಳಲು ಭಾರತವೇ ಕಾರಣ ಎಂಬ ಪಾಕ್ ಆರೋಪವನ್ನು ಭಾರತ ತಳ್ಳಿ ಹಾಕಿದೆ.
ವಿಶ್ವಸಂಸ್ಥೆಯ ಮಹಾಸಭೆಯಲ್ಲಿ ಶರೀಫ್ ಅವರ ಮಾತಿಗೆ ಉತ್ತರಿಸಿದ ಭಾರತ, ಪಾಕ್ ಪ್ರಧಾನಿ ಅಸಮರ್ಥನೀಯವಾದ ಮಾತುಗಳನ್ನು ಉಲ್ಲೇಖಿಸಿದ್ದಾರೆ ಎಂದು ಹೇಳಿದೆ.
ಈ ಅಗಸ್ಟ್ ತಿಂಗಳಲ್ಲಿ ಜಮ್ಮು ಕಾಶ್ಮೀರದ ಜನತೆ ಪ್ರಜಾಪ್ರಭುತ್ವ ಕಾನೂನು ಪ್ರಕಾರ ಅವರ ಗಮ್ಯವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆದ್ದರಿಂದ ಪಾಕ್ ಪ್ರಧಾನಿ ಮಾಡಿದ ಆರೋಪಗಳು ನಿರಾಧಾರ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ನಿಯೋಗದ ಕಾರ್ಯದರ್ಶಿ ಅಭಿಷೇಕ್ ಸಿಂಗ್ ಹೇಳಿದ್ದಾರೆ.