ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಅಕ್ರಮ ಆಸ್ತಿ ಪ್ರಕರಣ: ಕೋರ್ಟ್‌ಗೆ ಜಯಾ ಹಾಜರ್, ತೀರ್ಪಿಗೆ ಕ್ಷಣಗಣನೆ

ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಶನಿವಾರ ವಿಶೇಷ ನ್ಯಾಯಾಲಯ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ...

Rashmi Kasaragodu
Updated On : 27 Sept 2014, 12:17 pm

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ಶನಿವಾರ ವಿಶೇಷ ನ್ಯಾಯಾಲಯ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಕಾರಾಗೃಹ ಸಮೀಪದ ಗಾಂಧಿ ಭವನದಲ್ಲಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದು, ಕೆಲವೇ ಕ್ಷಣಗಳಲ್ಲಿ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ.

ಚೆನ್ನೈನಿಂದ ವಿಮಾನದ ಮೂಲಕ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಜಯಾ, ಅಲ್ಲಿಂದ ನೆರವಾಗಿ ರಸ್ತೆಯ ಮೂಲಕ ಕಾರಿನಲ್ಲಿ ಪರಪ್ಪನ ಅಗ್ರಹಾರಕ್ಕೆ ತೆರಳಿದರು. ಜಯಾ ಸೇರಿದಂತೆ ಇತರ ಆರೋಪಿಗಳಾದ ಮಾಜಿ ಜಯಲಲಿತಾ ಆಪ್ತೆ ವಿ.ಕೆ.ಶಶಿಕಲಾ ಹಾಗೂ ಅವರ ಸಂಬಂಧಿ ಸುಧಾಕರನ್, ಇಳವರಸಿ ಕೂಡಾ ಬೆಳಗ್ಗೆ 10.30ರ ಸುಮಾರಿಗೆ ಕೋರ್ಟ್‌ಗೆ ಹಾಜರಾಗಿದ್ದಾರೆ.

ಜಯಾ ಅವರ ಆಗಮನದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊಸ ರೋಡ್ ಜಂಕ್ಷನ್‌ನಲ್ಲಿ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದು, ಅಮ್ಮನಿಗೆ ಜೈಕಾರ ..ಪೊಲೀಸರಿಗೆ ಧಿಕ್ಕಾರ ಕೂಗುತ್ತಿದ್ದಾರೆ.

ಅದೇ ವೇಳೆ ಪರಪ್ಪನ ಅಗ್ರಹಾರದ ಬಳಿ ನಿಷೇಧಾಜ್ಞೆ ಹೇರಲಾಗಿದ್ದು, ಪಾಸ್ ಹೊಂದಿದವರಿಗೆ ಮಾತ್ರ  ಜೈಲು ಆವರಣಕ್ಕೆ ಪ್ರವೇಶ ನೀಡಲಾಗುತ್ತಿದೆ. ತಮಿಳ್ನಾಡು ಮುಖ್ಯಮಂತ್ರಿಯವರ ವಿಚಾರಣೆ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಒದಗಿಸಲಾಗಿದ್ದು, ಜೈಲು ಬಳಿ ಜಯಾ ಬೆಂಬಲಿಗರಿಗೆ ಅವಕಾಶ ನಿರಾಕರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement