ಮಹಾ ಚುನಾವಣೆ: 288 ಸೀಟುಗಳಲ್ಲಿ ಶಿವಸೇನೆ ಸ್ಪರ್ಧೆ
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಒಟ್ಟು ಇರುವ 288 ಸೀಟುಗಳಲ್ಲಿ ಸ್ಪರ್ಧಿಸಲಿದ್ದು...
ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಒಟ್ಟು ಇರುವ 288 ಸೀಟುಗಳಲ್ಲಿ ಸ್ಪರ್ಧಿಸಲಿದ್ದು, ಶುಕ್ರವಾರ ರಾತ್ರಿ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದೆ.
ಆದರೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವುದಕ್ಕೆ ಸೇನೆ ನಿರಾಕರಿಸಿದ್ದು, ಅಭ್ಯರ್ಥಿಗಳು ಖುದ್ದಾಗಿ ನಾಮಪತ್ರ ಸಲ್ಲಿಸುವಂತೆ ಹೇಳಿದೆ.
ಸೆಪ್ಟೆಂಬರ್ 27ಕ್ಕೆ ನಾಮಪತ್ರ ಸಲ್ಲಿಸುವ ಅಂತಿಮ ದಿನಾಂಕವಾಗಿದೆ.
ನಾಮಪತ್ರ ಸಲ್ಲಿಕೆಯ ನಂತರ ಸೇನೆ ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಿದ್ದು, ಶನಿವಾರ ಮುಂಬೈಯಲ್ಲಿ ಬೃಹತ್ ರ್ಯಾಲಿಯನ್ನು ಹಮ್ಮಿಕೊಳ್ಳಲಿದೆ. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಈ ರ್ಯಾಲಿಯ ನೇತೃತ್ವ ವಹಿಸಲಿದ್ದಾರೆ. ಬಿಜೆಪಿಯ ಜತೆಗೆ ಮೈತ್ರಿ ಮುರಿದು ಕೊಂಡ ನಂತರ ಇದೇ ಮೊದಲ ಬಾರಿಗೆ ಸೇನೆ ಹೀಗೊಂದು ರ್ಯಾಲಿಯನ್ನು ನಡೆಸುತ್ತಿದೆ.