ಅಮ್ಮಗೆ 4 ವರ್ಷ ಜೈಲು, 100 ಕೋಟಿ ದಂಡ
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾಗೆ ಸಿಬಿಐ ವಿಶೇಷ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 100 ಕೋಟಿ ರುಪಾಯಿ ದಂಡ ವಿಧಿಸಿದೆ.
ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ್ದ ಬೆಂಗಳೂರಿನ ವಿಶೇಷ ನ್ಯಾಯಾಲದ ನ್ಯಾಯಾಧೀಶರಾದ ಜಾನ್ ಮೈಕಲ್ ಡಿ ಕುನ್ಹಾ ಅವರು, ಜಯಲಲಿತಾ ಸೇರಿದಂತೆ ಪ್ರಕರಣದ ನಾಲ್ವರು ಆರೋಪಿಗಳು ತಪ್ಪಿತಸ್ಥರೆಂದು ಘೋಷಿಸಿ, ತಲಾ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ.
ಜಯಲಲಿತಾಗೆ 100 ಕೋಟಿ ರುಪಾಯಿ ದಂಡ ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿರುವ ನ್ಯಾಯಾಲಯ ಇತರ ಅಪರಾಧಿಗಳಾದ ಜಯಲಲಿತಾ ಮಾಜಿ ಆಪ್ತೆ ಶಶಿಕಲಾ, ಸಾಕುಮಗ ವಿ.ಎನ್. ಸುಧಾರಕನ್ ಜೆ. ಇಳವರಿಸಿಗೆ ತಲಾ 10 ಕೋಟಿ ದಂಡ ಹಾಗೂ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.