ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ , ಎಐಎಡಿಎಂಕೆ ನಾಯಕಿ ಜೆ.ಜಯಲಲಿತಾ ಪರ ವಕೀಲರು ಸೋಮವಾರ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಜಯಾ ಪರ ವಕೀಲರು ಸಿಬಿಐ ತೀರ್ಪನ್ನು ರದ್ದುಗೊಳಿಸಬೇಕು ಹಾಗೂ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಮಧ್ಯೆ ನಾಲ್ಕು ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಜಯಲಲಿತಾ ಪರ ವಕಾಲತ್ತು ವಹಿಸಲು ಖ್ಯಾತ ನ್ಯಾಯಾವಾದಿ ರಾಮ್ ಜೇಠ್ಮಲಾನಿ ಇಂದು ನಗರಕ್ಕೆ ಆಗಮಿಸಿದ್ದಾರೆ.
ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದೆ.