ಜಯಾ ಬೆಂಬಲಿಗರಿಂದ ಉಪವಾಸ ಸತ್ಯಾಗ್ರಹ
ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಜೈಲು ವಾಸ ಅನುಭವಿಸುತ್ತಿರುವ ತಮಿಳ್ನಾಡು ಮಾಜಿ ಸಿಎಂ ಜೆ. ಜಯಲಲಿತಾ...
ಚೆನ್ನೈ: ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಜೈಲು ವಾಸ ಅನುಭವಿಸುತ್ತಿರುವ ತಮಿಳ್ನಾಡು ಮಾಜಿ ಸಿಎಂ ಜೆ. ಜಯಲಲಿತಾ ಅವರ ಶಿಕ್ಷೆ ರದ್ದು ಮಾಡುವಂತೆ ಕೋರಿ ಅವರ ಬೆಂಬಲಿಗರು ಸೋಮವಾರ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ನಿಯೋಜಿತ ಸಿಎಂ ಪನ್ನೀರ್ ಸೆಲ್ವಂ ನೇತೃತ್ವದಲ್ಲಿ ಚೆನ್ನೈನ ಮರೀನಾಬೀಚ್ನಲ್ಲಿರುವ ಮಾಜಿ ಸಿಎಂ ಎಂಜಿಆರ್ ಸಮಾಧಿ ಬಳಿ ಜಯಾ ಬೆಂಬಲಿಗರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ.
ಸಚಿವರು ಶಾಸಕರು ಕಪ್ಪುಪಟ್ಟಿ ಧರಿಸಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದು, ಈ ಸತ್ಯಾಗ್ರಹದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆಇದೆ ಎಂದು ಹೇಳಲಾಗುತ್ತಿದೆ.