ಜಯಾ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ
ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ...
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಹೀಗಾಗಿ ಇನ್ನೂ ಆರು ದಿನಗಳ ಕಾಲ ಜಯಲಲಿತಾ ಅವರು ಜೈಲಿನಲ್ಲಿ ಕಳೆಯಬೇಕಾಗಿದೆ.
ಇಂದು ಎಐಎಡಿಎಂಕೆ ನಾಯಕಿ ಜಯಲಲಿತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ರಜಾ ಕಾಲದ ಹೈಕೋರ್ಟ್ ಪೀಠ, ಸರ್ಕಾರಿ ಅಭಿಯೋಜಕರಿಲ್ಲದ ಕಾರಣ ವಿಚಾರಣೆಯನ್ನು ಅ.6ಕ್ಕೆ ಮುಂದೂಡಿದೆ. ಅಲ್ಲದೆ ಹೊಸ ಸರ್ಕಾರಿ ಅಭಿಯೋಜಕರ ನೇಮಕ ಸಂಬಂಧ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
10 ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಯಾಗಿರುವುದರಿಂದ ಈ ಪ್ರಕರಣದಲ್ಲಿ ಅಪರಾಧಿಗೆ ಜಾಮೀನು ನೀಡಬಹುದು ಎಂದು ಜಯಾ ಪರ ವಕೀಲ ರಾಮ್ಜೇಠ್ಮಲಾನಿ ಅವರು ವಾದ ಮಂಡಿಸಿದರು.