ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಜಯಾ ಜಾಮೀನು ಅರ್ಜಿ ವಿಚಾರಣೆ ನಾಳೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ...

Lingaraj Badiger
Updated On : 30 Sept 2014, 4:34 am

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಜೈಲು ಪಾಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಯೇ ನಡೆಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಅವರು ಸೋಮವಾರ ಆದೇಶಿಸಿದ್ದಾರೆ.

ಇಂದು ಬೆಳಗ್ಗೆ ಎಐಎಡಿಎಂಕೆ ನಾಯಕಿ ಜಯಲಲಿತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ರಜಾ ಕಾಲದ ಹೈಕೋರ್ಟ್ ಪೀಠ, ಸರ್ಕಾರಿ ಅಭಿಯೋಜಕರಿಲ್ಲದ ಕಾರಣ ವಿಚಾರಣೆಯನ್ನು ಅ.6ಕ್ಕೆ ಮುಂದೂಡಿತ್ತು. ಅಲ್ಲದೆ ಹೊಸ ಸರ್ಕಾರಿ ಅಭಿಯೋಜಕರ ನೇಮಕ ಸಂಬಂಧ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಸಹ ನೀಡಿತ್ತು.

ಆದರೆ ಜಯಾ ಪರ ವಾದ ಮಂಡಿಸಿದ್ದ ವಕೀಲ ರಾಮ್‌ಜೇಠ್ಮಲಾನಿ ಅವರು ನಾಳೆಯೇ ಅರ್ಜಿಯ ವಿಚಾರಣೆ ನಡೆಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜ್ಯುಡಿಷಿಯಲ್‌ಗೆ ಮನವಿ ಮಾಡಿದ್ದರು. ಜಯಾ ಪರ ವಕೀಲರ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿಗಳು ನಾಳೆ ಹೈಕೋರ್ಟ್‌ನ ವಿಶೇಷ ಪೀಠದಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ.

ಜೇಠ್ಮಲಾನಿ ಅವರು ಸಿಆರ್‌ಪಿಸಿ ಸೆಕ್ಸೆನ್ 389 ಅನ್ನು ಉಲ್ಲೇಖಿಸಿ, ಆಕ್ಷೇಪಣೆಯನ್ನು ಪರಿಗಣಿಸದೆಯೇ ಜಾಮೀನು ನೀಡುವ ಅಧಿಕಾರ ಹೈಕೋರ್ಟ್‌ಗೆ ಇದೆ ಮತ್ತು ಸರ್ಕಾರಿ ಅಭಿಯೋಜಕರ ನೇಮಕಕ್ಕೂ ಮತ್ತು ಜಾಮೀನು ಅರ್ಜಿಯ ವಿಚಾರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement