ಇಂದು ಜಯಲಲಿತಾ ಜಾಮೀನು ಅರ್ಜಿ ವಿಚಾರಣೆ
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ದೋಷಿಯಾಗಿ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ...
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ದೋಷಿಯಾಗಿ ಜೈಲಿನಲ್ಲಿರುವ ಎಐಎಡಿಎಂಕೆ ನಾಯಕಿ ಜಯಲಲಿತಾ ಹಾಗು ಇತರೆ ಮೂವರ ಜಾಮೀನು ಅರ್ಜಿ ವಿಚಾರಣೆ ಇಂದು (ಬುಧವಾರ) ನಡೆಯಲಿದೆ.
ಸದ್ಯ ಹೈಕೋರ್ಟ್ ದಸರಾ ರಜೆಯಲ್ಲಿದೆ. ಹೀಗಾಗಿ ಜಯಲಲಿತಾ ಜಾಮೀನು ಅರ್ಜಿಯನ್ನು ಮಂಗಳವಾರಕ್ಕೆ ನಿಗದಿ ಮಾಡಲಾಗಿತ್ತು. ಇದರಂತೆ ನಿನ್ನೆ ನ್ಯಾ.ರತ್ನಕಲಾ ಅವರ ಪೀಠ ವಿಚಾರಣೆ ಕೈಗೆತ್ತಿಕೊಂಡಿತ್ತು. ಹಿರಿಯ ವಕೀಲ ರಾಮ್ ಜೇಠ್ಮಲಾನಿ ಜಯಲಲಿತಾ ಪರವಾಗಿ ವಾದಿಸಿದ್ದು, ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಲಾಗಿತ್ತು.
ಜಯಾ ಮೇಲ್ಮನವಿ ಅರ್ಜಿ ವಿಚಾರಣೆಯ ಹಿನ್ನೆಲೆಯಲ್ಲಿ ಜೇಠ್ಮಲಾನಿ ಈಗಾಗಲೇ ಹೈಕೋರ್ಟ್‌ಗೆ ಆಗಮಿಸಿದ್ದಾರೆ. ಅದೇ ವೇಳೆ ತಮಿಳುನಾಡಿನಿಂದ ಜಯಾ ಬೆಂಬಲಿಗರು ಬೆಂಗಳೂರಿಗೆ ಆಗಮಿಸಿದ್ದು ನ್ಯಾಯಾಲಯದ ತೀರ್ಪಿಗೆ ಕಾದು ಕುಳಿತಿದ್ದಾರೆ.