ಬೆಂಗಳೂರು: ಮೊನ್ನೆ ರಾತ್ರಿ ಅಂಟೆಂಡರ್ ನ ಗುಂಡೇಟಿಗೆ ಬಲಿಯಾದ ಪಿಯು ವಿದ್ಯಾರ್ಥಿನಿ ಗೌತಮಿ ಹತ್ಯೆ ಪ್ರಕರಣಕ್ಕೆ ಸಂಬಂಧ ಪ್ರಗತಿ ಕಾಲೇಜಿನ ಪ್ರಿನ್ಸಿಪಾಲ್ ಪ್ರಶಾಂತ್ ಅವರನ್ನು ಕಾಡುಗೋಡಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಗೌತಮಿ ಹತ್ಯೆ ಪ್ರಕರಣದಲ್ಲಿ ನಿರ್ಲಕ್ಷ್ಯವಹಿಸಿದ್ದ ಹಿನ್ನೆಲೆಯಲ್ಲಿ ಪ್ರಶಾಂತ್ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಕುರಿತಂತೆ ಐಪಿಸಿ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಬುಧವಾರ ರಾತ್ರಿಯೇ ಪ್ರಗತಿ ಟ್ರಸ್ಟ್ ಅಧ್ಯಕ್ಷ ಕೆ.ಎಂ.ಸೋಮ್ ಸಿಂಗ್ ಅವರನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದರು. ಅಲ್ಲದೇ, ಗೌತಮಿಗೆ ಗುಂಡಿಟ್ಟು ಕೊಂದ ಹಂತಕ ಮಹೇಶ್ ನನ್ನು ಮನೆ ಮಾಲೀಕರೇ ಪೊಲೀಸರಿಗೆ ಹಿಡಿದುಕೊಟ್ಟಿದ್ದರು.
ನಿನ್ನೆ ಮಧ್ಯಾಹ್ನ ಕಾಡುಗೋಡಿ ಪೊಲೀಸರು ಮಹೇಶ್ ನನ್ನು ಬಂಧಿಸಿದ್ದು, ಇಂದು ಆತನನ್ನು ಕೋರ್ಟ್ ಗೆ ಹಾಜರು ಪಡಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.