ಎಲ್ ಕೆ ಅಡ್ವಾಣಿ 
ಪ್ರಧಾನ ಸುದ್ದಿ

ಎಲ್ ಕೆ ಅಡ್ವಾಣಿ ಭಾಷಣ ಇಲ್ಲದೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ಮೂಲೆಗೆ ತಳ್ಳಲ್ಪಟ್ಟಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಯಾವುದೇ ಭಾಷಣ ಮಾಡಲಿಲ್ಲ.

ಬೆಂಗಳೂರು: ಮೂಲೆಗೆ ತಳ್ಳಲ್ಪಟ್ಟಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಬಿಜೆಪಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಯಾವುದೇ ಭಾಷಣ ಮಾಡಲಿಲ್ಲ. ಇದು ಪಕ್ಷದ ಅಧಿಕಾರದ ಸಮೀಕರಣ ಪ್ರತಿಧ್ವನಿಸಿದೆ ಎನ್ನಲಾಗಿದೆ.

ಸಾಮಾನ್ಯವಾಗಿ ಎಲ್ಲ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗಳಲ್ಲೂ ಅವರು ಮಾತನಾಡಿದ್ದಾರೆ. ಈ ಸಭೆಯಲ್ಲಿ ಅವರು ಏಕೆ ಭಾಷಣ ಮಾಡಲಿಲ್ಲ ಎಂಬುದರ ಬಗ್ಗೆ ಬಿಜೆಪಿ ಅಧಿಕೃತವಾಗಿ ಏನನ್ನು ತಿಳಿಸಿಲ್ಲ. ಆದರೆ ಅವರ ಮೇಲೆ ಬರೆದು ಕೊಟ್ಟ ಭಾಷಣ ಓದಬೇಕೆಂಬ ಒತ್ತಡ ತಂದಿದ್ದರಿಂದ ಅವರು ಭಾಷಣ ಮಾಡುವುದರಿಂದ ಹಿಂದೆಸರಿದರು ಎಂದು ತಿಳಿದುಬಂದಿದೆ.

ಪಕ್ಷದಲ್ಲಿ ಮೂಲೆಗೆ ತಳ್ಳಲ್ಪಟ್ಟಿರುವ ಅಡ್ವಾಣಿಯವರು ಎರಡು ದಿನ ಸಭೆಯಲ್ಲಿ ಹಾಜರಿದ್ದರು. ೨೧೦೩ ಗೋವಾದಲ್ಲಿ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಅಡ್ವಾಣಿ ಹೋಗಿರಲಲಿಲ್ಲ. ಆ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

"ಪಕ್ಷದ ಆಂತರಿಕ ನಿರ್ಧಾರಗಳ ಬಗ್ಗೆ ನಾವು ಮಾಧ್ಯಮಕ್ಕೆ ತಿಳಿಸುವುದಿಲ್ಲ. ಮಾಹಿತಿ ಹಕ್ಕು ಕಾಯ್ದೆ, ಪಾರದರ್ಶಕತೆಯ ಸಮಯದಲ್ಲೂ ನಾವು ಈ ಮಾಹಿತಿಗಳನ್ನು ಹಂಚಿಕೊಳ್ಳುವುದಿಲ್ಲ" ಎಂದು ಅಡ್ವಾಣಿ ಭಾಷಣ ಮಾಡದಿದ್ದೇಕೆ ಎಂಬ ಪ್ರಶ್ನೆಗೆ ವಿತ್ತ ಸಚಿವ ಅರುಣ್ ಜೇಟ್ಲಿ ಪತ್ರಕರ್ತರನ್ನುದ್ದೇಶಿಸಿ ಹೇಳಿದ್ದರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಿರಾಳ; ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವ ನಿರ್ಧಾರ ರದ್ದು!

'ನ್ಯಾಯಾಂಗ ತನಿಖೆಗೆ ಒಪ್ಪಿಸಿ, ₹1 ಕೋಟಿ ಪರಿಹಾರ ನೀಡಿ': ಹನೂರು ಶೂಟೌಟ್ ಪ್ರಕರಣದ ಮಹಿಮಾ ದಾಸ್ ಸೇರಿ ಸಂತ್ರಸ್ತರ ಆಗ್ರಹ