ಕಾರ್ಯಾಚರಣೆ ನಡೆದ ಸ್ಥಳ 
ಪ್ರಧಾನ ಸುದ್ದಿ

ಆಂಧ್ರ ಎನ್‌ಕೌಂಟರ್‌ನಲ್ಲಿ ಮೃತಪಟ್ಟ 20 ಕಾಡುಗಳ್ಳರಿಗೆ ತಮಿಳುನಾಡು ಸರ್ಕಾರದಿಂದ ಪರಿಹಾರ ಘೋಷಣೆ

ಆಂಧ್ರಪ್ರದೇಶದಲ್ಲಿ ಮಂಗಳವಾರ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಮೃತಪಟ್ಟ 20 ಕಾಡುಗಳ್ಳರ ಕುಟುಂಬಕ್ಕೆ ತಮಿಳುನಾಡು ಸರ್ಕಾರ ಬುಧವಾರ ಪರಿಹಾರ ಘೋಷಿಸಿದೆ.

ಚೆನ್ನೈ: ಆಂಧ್ರಪ್ರದೇಶದಲ್ಲಿ ಮಂಗಳವಾರ ನಡೆದ ಭಾರಿ ಗುಂಡಿನ ಕಾಳಗದಲ್ಲಿ ಮೃತಪಟ್ಟ 20 ಕಾಡುಗಳ್ಳರ ಕುಟುಂಬಕ್ಕೆ ತಮಿಳುನಾಡು ಸರ್ಕಾರ ಬುಧವಾರ ಪರಿಹಾರ ಘೋಷಿಸಿದೆ.

ವರದಿಗಳ ಪ್ರಕಾರ, ಎಐಎಡಿಎಂಕೆ ಸರ್ಕಾರ ಮೃತರ ಕುಟುಂಬಕ್ಕೆ ತಲಾ ಮೂರು ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ.

ಚಿತ್ತೂರು ಜಿಲ್ಲೆ, ಚಂದ್ರಗಿರಿ ಮಂಡಲ್ ಶ್ರೀನಿವಾಸ ಮಂಗಾಪುರದ ಸಮೀಪ ನಿನ್ನೆ ಆಂಧ್ರದ ವಿಷೇಷ ಕಾರ್ಯಪಡೆ ಪೊಲೀಸರು ಮತ್ತು ಅರಣ್ಯ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ತಮಿಳುನಾಡಿನ 20 ರಕ್ತಚಂದನ ಕಳ್ಳರು ಹತರಾಗಿದ್ದರು. ಆದರೆ ಆಂಧ್ರದ ಈ ಕಾರ್ಯಾಚರಣೆಯನ್ನು ತೀವ್ರವಾಗಿ ವಿರೋಧಿಸಿರುವ ತಮಿಳುನಾಡು ಸರ್ಕಾರ, ಮೃತಪಟ್ಟವರು ಕಳ್ಳರಲ್ಲ, ನಮ್ಮ ರಾಜ್ಯದ ಕೂಲಿ ಕಾರ್ಮಿಕರು ಎಂದು ಹೇಳಿದೆ.

ಆಂಧ್ರಪ್ರದೇಶ ಪೊಲೀಸರ ಕ್ರಮವನ್ನು ಬಲವಾಗಿ ಖಂಡಿಸಿರುವ ತಮಿಳುನಾಡು ಸರ್ಕಾರ, ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಟೀಕಿಸಿದೆ.

ಈ ಮಧ್ಯೆ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸಹ ಆಂಧ್ರಪ್ರದೇಶ ಮುಖ್ಯ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!