ಬಿಜೆಪಿ ಶಾಸಕ ಆನಂದ್ ಸಿಂಗ್ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಆನಂದ್ ಸಿಂಗ್‌ಗೆ ಏ.17ರವರೆಗೆ ನ್ಯಾಯಾಂಗ ಬಂಧನ

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಗುರುವಾರ ಬಂಧಿಸಿದೆ.

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಗುರುವಾರ ಬಂಧಿಸಿದೆ.

ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ಆನಂದ್ ಸಿಂಗ್ ಅವರನ್ನು ಬಂಧಿಸಿ, ಮಧ್ಯಾಹ್ನ ಬೆಂಗಳೂರಿನ ಲೋಕಾಯುಕ್ತ ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ಆನಂದ್ ಸಿಂಗ್ ಅವರನ್ನು ಏಪ್ರಿಲ್ 17ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಈ ಹಿಂದೆ ಇದೇ ಪ್ರಕರಣ ಸಂಬಂಧ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಆನಂದ್ ಸಿಂಗ್, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಆನಂದ್ ಸಿಂಗ್ ವಿರುದ್ಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಕಳೆದ 2013 ಅಕ್ಟೋಬರ್ 17ರಂದು ಶಾಸಕ ಆನಂದ್ ಸಿಂಗ್ ಅವರನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

ಬೆಂಗಳೂರು: ಮನೆಯಲ್ಲೇ ತಂದೆ-4 ವರ್ಷದ ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!