ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಪ್ರಧಾನ ಸುದ್ದಿ

ಆಸಿಡ್ ದಾಳಿ ಪೀಡಿತರಿಗೆ ಉಚಿತ ಚಿಕಿತ್ಸೆ ನೀಡಿ: ಖಾಸಗಿ ಆಸ್ಪತ್ರೆಗಳಿಗೆ "ಸುಪ್ರೀಂ" ಸೂಚನೆ

ಆಸಿಡ್ ದಾಳಿಗೊಳಗಾದವರಿಗೆ ಕೂಡಲೇ ಉಚಿತ ಚಿಕಿತ್ಸೆ ನೀಡಬೇಕು ಎಂದು ಶನಿವಾರ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ...

ಆಸಿಡ್ ದಾಳಿ
Srinivasa Murthy VN
Updated On : 11 Apr 2015, 12:04 pm

ನವದೆಹಲಿ: ಆಸಿಡ್ ದಾಳಿಗೊಳಗಾದವರಿಗೆ ಕೂಡಲೇ ಉಚಿತ ಚಿಕಿತ್ಸೆ ನೀಡಬೇಕು ಎಂದು ಶನಿವಾರ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಆಸಿಡ್ ದಾಳಿಗೆ ಸಂಬಂಧಿಸಿದಂತೆ ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ದೇಶದ ಎಲ್ಲ ಖಾಸಗಿ ಆಸ್ಪತ್ರೆಗಳು ಆಸಿಡ್ ಪೀಡಿತರಿಗೆ ಉಚಿತ ಚಿಕಿತ್ಸೆ ನೀಡಬೇಕು ಎಂದು ಸೂಚನೆ ನೀಡಿದೆ. ಅಲ್ಲದೆ ಈ ಬಗ್ಗೆ ಎಲ್ಲ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

2006ರಲ್ಲಿ ಲಕ್ಷ್ಮಿ ಎಂಬಾಕೆಯ ಮೇಲೆ ನಡೆದಿದ್ದ ಆಸಿಡ್ ದಾಳಿ ಪ್ರಕರಣ ಸಂಬಂಧ ದಾಖಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸಾಮಾಜಿಕ ನ್ಯಾಯಪೀಠದ ನ್ಯಾಯಮೂರ್ತಿ ಮದನ್ ಬಿ ಲೋಕೂರ್ ಅವರು, ಆಸಿಡ್ ದಾಳಿಗೊಳಗಾದವರಿಗೆ ಖಾಸಗಿ ಆಸ್ಪತ್ರೆಗಳು ಉಚಿತ ಚಿಕಿತ್ಸೆ ನೀಡುವುದರೊಂದಿಗೆ ಶಸ್ತ್ರಚಿಕಿತ್ಸೆ ಅಗತ್ಯವಾದಲ್ಲಿ ಅದನ್ನು ಕೂಡಾ ಮಾಡಬೇಕು. ಖಾಸಗಿ

ಆಸ್ಪತ್ರೆಗಳು ಆಸಿಡ್ ದಾಳಿಗೊಳಗಾದವರಿಗೆ ನೀಡಿದ ಚಿಕಿತ್ಸೆಯ ಬಗ್ಗೆ ಸಂಪೂರ್ಣ ಪ್ರಮಾಣ ಪತ್ರಗಳನ್ನು ಸರ್ಕಾರಕ್ಕೆ ನೀಡಿದಲ್ಲಿ ಮುಂದೆ ಪರಿಹಾರ ಹಣ ಪಡೆಯಲು ನೆರವಾಗುತ್ತದೆ ಎಂದು ತಿಳಿಸಿದ್ದಾರೆ.

"ಆಸಿಡ್ ದಾಳಿಗೊಳಗಾದವರಿಗೆ ರಾಜ್ಯ ಸರ್ಕಾರಗಳು 3 ಲಕ್ಷ ರೂಪಾಯಿ ಪರಿಹಾರ ಅಥವಾ ಆರ್ಥಿಕ ನೆರವು ನೀಡಬೇಕು ಎಂದಿರುವ ನ್ಯಾಯಪೀಠ, ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಕಳ ವಿರುದ್ಧ ಭಾರಿ ದಂಡ ಹಾಗೂ ಕಠಿಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ ಎಂದು ಕೋರ್ಟ್ ಎಚ್ಚರಿಸಿದೆ.

ದೇಶದಲ್ಲಿನ ಖಾಸಗಿ ಆಸ್ಪತ್ರೆಗಳು ಆಸಿಡ್ ದಾಳಿಗೊಳಗಾದವರಿಗೆ ಪ್ರಾಥಮಿಕ ಚಿಕಿತ್ಸೆ ನೀಡುವುದರೊಂದಿಗೆ ಉಚಿತ ಚಿಕಿತ್ಸೆಯನ್ನು ನೀಡಬೇಕಾಗುತ್ತದೆ ಎಂದು ಕೇಂದ್ರ ಸರಕಾರ ಕೋರ್ಟ್‌ಗೆ ಮಾಹಿತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement