ಬಿಜೆಪಿ ಶಾಸಕ ಆನಂದ್ ಸಿಂಗ್ ರಾಜಿನಾಮೆ
ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಸೋಮವಾರ ರಾಜಿನಾಮೆ ನೀಡಿದ್ದಾರೆ. ಜೈಲಿನಲ್ಲಿ ಇದ್ದು ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಬೇಸರ...
ಬೆಂಗಳೂರು: ಬಿಜೆಪಿ ಶಾಸಕ ಆನಂದ್ ಸಿಂಗ್ ಅವರು ಶಾಸಕ ಸ್ಥಾನಕ್ಕೆ ಸೋಮವಾರ ರಾಜಿನಾಮೆ ನೀಡಿದ್ದಾರೆ.
ಜೈಲಿನಲ್ಲಿ ಇದ್ದು ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಹೊಸಪೇಟೆ (ವಿಜಯನಗರ)ಯ ಬಿಜೆಪಿ ಶಾಸಕ ಆನಂದ್ ಸಿಂಗ್, ತಮ್ಮ ರಾಜಿನಾಮೆ ಪತ್ರವನ್ನು ಸ್ಪೀಕರ್ ಕಾಗೋಡು ತಿಮ್ಮಪ್ಪನವರಿಗೆ ರವಾನಿಸಿದ್ದಾರೆ.
ಅಕ್ರಮವಾಗಿ ಅದಿರು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತದ ವಿಶೇಷ ತನಿಖಾ ತಂಡ ಬೆಂಗಳೂರಿನಲ್ಲಿ ಗುರುವಾರ ಬಂಧಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.