ವಿಧಾನಸೌಧ 
ಪ್ರಧಾನ ಸುದ್ದಿ

ಬಿಬಿಎಂಪಿ ವಿಭಜನೆ: ಏ.20ಕ್ಕೆ ವಿಶೇಷ ಅಧಿವೇಶನ ಕರೆದ ಸರ್ಕಾರ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿದೆ.

ಏಪ್ರಿಲ್ 20ರಂದು ಒಂದು ದಿನದ ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿದ್ದು, ಬಿಬಿಎಂಪಿ ವಿಭಜನೆ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ, ಚರ್ಚಿಸಿ, ಅಂಗೀಕರಿಸುವ ಸಾಧ್ಯತೆ ಇದೆ.

ಬಿಬಿಎಂಪಿ ಮೂರು ಭಾಗದ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಇದೀಗ ಉಭಯ ಸದನಗಳ ವಿಶೇಷ ಅಧಿವೇಶನ ಕರೆದು ಮಸೂದೆ ಮಂಡಿಸಿ ಕಾಯ್ದೆ ರೂಪಿಸಲು ಮುಂದಾಗಿದೆ.

ಕಾಂಗ್ರೆಸ್ ಸರ್ಕಾರಕ್ಕೆ ವಿಧಾನ ಪರಿಷತ್‍ನಲ್ಲಿ ಬಹುಮತ ಇಲ್ಲ. ಹೀಗಾಗಿ ಅಧಿವೇಶನದಲ್ಲಿ ಮಸೂದೆ ಮಂಡಿಸಿ ರಾಜ್ಯಪಾಲರಿಗೆ ಕಳುಹಿಸಿದರೆ ವಿಭಜನೆ ಸಾಧ್ಯ ಎನ್ನುವ ತೀರ್ಮಾನಕ್ಕೆ  ಸರ್ಕಾರ ಬಂದಿದೆ. ಒಂದು ವೇಳೆ ಈ ಮಸೂದೆಗೆ ರಾಜ್ಯಪಾಲರು ಸಹಿ ಹಾಕದೇ ಪುನಃ ಹಿಂದಕ್ಕೆ ಕಳುಹಿಸಬಹುದು. ಆದರೆ ಮತ್ತೆ ರಾಜ್ಯ ಸರ್ಕಾರ ಯಾವುದೇ ತಿದ್ದುಪಡಿ ಮಾಡದೇ ಅದನ್ನು ರಾಜ್ಯಪಾಲರಿಗೆ ಕಳುಹಿಸಿದರೆ ರಾಜ್ಯಪಾಲರು ಮಸೂದೆ ಸಹಿ ಹಾಕಲೇಬೇಕಾಗುತ್ತದೆ. ರಾಜ್ಯಪಾಲರು ಸಹಿ ಹಾಕಿದರೆ ಅದು ಕಾಯ್ದೆಯಾಗುವುದರಿಂದ ಬಿಬಿಎಂಪಿ ವಿಭಜನೆ ಕಾರ್ಯ ಸುಲಭವಾಗುತ್ತದೆ. ಇದಕ್ಕೆ ನ್ಯಾಯಾಲಯ ಅಡ್ಡಿಯಾಗುವ ಸಾಧ್ಯತೆ ತೀರಾ ಕಡಿಮೆ.

ಈ ಮಧ್ಯೆ, ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ