ಜಯಲಲಿತಾ 
ಪ್ರಧಾನ ಸುದ್ದಿ

ಅಕ್ರಮ ಆಸ್ತಿ ಪ್ರಕರಣ: ಜಯಾ ಜಾಮೀನು ಅವಧಿ ಮೇ.12ರವರೆಗೆ ವಿಸ್ತರಣೆ

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ಮೇ.12ರವರಗೆ ವಿಸ್ತರಿಸಿದೆ.

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಜಾಮೀನು ಅವಧಿಯನ್ನು ಸುಪ್ರೀಂ ಕೋರ್ಟ್ ಮೇ.12ರವರಗೆ ವಿಸ್ತರಿಸಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಜಯಲಿಲಿತಾ ಅವರು ಕಳೆದ ಅಕ್ಟೋಬರ್ ನಲ್ಲಿ ಸುಪ್ರೀಂ ಕೋರ್ಟ್ ನಿಂದ  ಆರು ತಿಂಗಳು ಜಾಮೀನು ಪಡೆದುಕೊಂಡಿದ್ದರು. ಆ ಜಾಮೀನಿನ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಇಂದು ಮತ್ತೆ ಜಾಮೀನು ಅವಧಿಯನ್ನು ವಿಸ್ತರಿಸಿದೆ.

ಕೆಳ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಜಯಲಲಿತಾ ಅವರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ಪ್ರತಿ ದಿನ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಗೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಮೇ 12ರಂದು ಅಂತಿಮ ತೀರ್ಪು ನೀಡುವಂತೆಯೂ ನಿರ್ದೇಶನ ನೀಡಿದೆ.

ಜಯಲಲಿತಾ ಹಾಗೂ ಇತರರ ಮೇಲ್ಮನವಿ ಅರ್ಜಿಯ ವಾದ - ಪ್ರತಿವಾದಗಳನ್ನು ಆಲಿಸಿರುವ ಹೈಕೋರ್ಟ್, ತೀರ್ಪನ್ನು ಕಾಯ್ದಿರಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ