ಕರ್ನಾಟಕ ಬಂದ್ 
ಪ್ರಧಾನ ಸುದ್ದಿ

ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ

ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ....

ಬೆಂಗಳೂರು: ಕುಡಿಯುವ ನೀರಿಗಾಗಿ ಆಗ್ರಹಿಸಿ ಮೇಕೆದಾಟು ಪ್ರದೇಶದಲ್ಲಿ ಕರ್ನಾಟಕ ಸರ್ಕಾರ ಆರಂಭಿಸಿರುವ ಯೋಜನೆಯನ್ನು ವಿರೋಧಿಸಿರುವ ತಮಿಳುನಾಡು ಕ್ರಮವನ್ನು ಖಂಡಿಸಿ ವಿವಿಧ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್ ಕರೆ ನೀಡಿದ್ದು, ರಾಜ್ಯಾದ್ಯಂತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ರಾಜಧಾನಿ ಬೆಂಗಳೂರು, ಮೈಸೂರು, ಮಡಿಕೇರಿ, ಕೋಲಾರ, ಚಾಮರಾಜನಗರ, ಶಿವಮೊಗ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಬಂದ್ ಆಚರಿಸಲಾಗುತ್ತಿದೆ. ಇನ್ನು ತುರ್ತು ಸೇವೆಗಳಾದ ಔಷಧಿಗಳು, ಹಾಲು, ಆ್ಯಂಬುಲೆನ್ಸ್, ಆಸ್ಪತ್ರೆಗಳು ಯಥಾಸ್ಥಿತಿಯಂತೆ ಕಾರ್ಯನಿರ್ವಹಿಸುತ್ತಿವೆ. ಮಾರುಕಟ್ಟೆಗಳು, ಶಾಪಿಂಗ್ ಮಾಲ್ ಗಳು, ಪೆಟ್ರೋಲ್ ಬಂಕ್ ಗಳು, ಶಾಲಾ-ಕಾಲೇಜುಗಳು, ಖಾಸಗಿ ಸಂಸ್ಥೆಗಳು ಸೇರಿದಂತೆ ಎಲ್ಲ ರೀತಿಯ ಸಂಸ್ಥೆಗಳು ಮುಚ್ಚಲ್ಪಟ್ಟಿವೆ.

ಇನ್ನು ರಾಜ್ಯದ ಪ್ರಮುಖ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರಗಳಲ್ಲಿ ಬಸ್ ಸಂಚಾರ ಬಹುತೇಕ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಇನ್ನು ನಾಳೆ ಕೆಎಎಸ್ ಪರೀಕ್ಷೆ ಇದ್ದು, ರಾಜ್ಯದ ನಾನಾ ಭಾಗಗಳಿಂದ ನೂರಾರು ಮಂದಿ ಪರೀಕ್ಷೆ ಬರೆಯಲು ಬೆಂಗಳೂರಿಗೆ ಆಗಮಿಸಿದ್ದಾರೆ. ಆದರೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಬ್ಧವಾಗಿದ್ದರಿಂದ ಪ್ರಯಾಣಿಕರು ಪರದಾಡುತ್ತಿದ್ದಾರೆ. ಇನ್ನು ಮುಂಜಾನೆ ಕಾರ್ಯನಿರ್ವಹಿಸುತ್ತಿದ್ದ ಬಿಎಂಟಿಸಿ ಬಸ್ ಗಳು ಬೆಳಗ್ಗೆ 8 ಗಂಟೆಯ ಬಳಿಕ ತಮ್ಮ ಸೇವೆಯನ್ನು ನಿಲ್ಲಿಸಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಹೊರ ಜಿಲ್ಲೆಗಳಿಗೆ ಸಂಚರಿಸಬೇಕಿದ್ದ ಎಲ್ಲ ಕೆಎಸ್ ಆರ್ ಟಿಸಿ ಬಸ್ ಗಳನ್ನು ಸ್ಥಗಿತಗೊಳಿಸಲಾಗಿದೆ.

ಇನ್ನು ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಆಟೋ ಒಕ್ಕೂಟಗಳು, ಕ್ಯಾಬ್ ಒಕ್ಕೂಟಗಳು, ಲಾರಿ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಚಾಮರಾಜನಗರದ ಕೆಎಸ್ ಆರ್ ಟಿಸಿ ಬಸ್ ನೌಕರರ ಒಕ್ಕೂಟ ಬಂದ್ ಬೆಂಬಲ ಘೋಷಿಸಿದ್ದು, ಬಸ್ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ.

ಪ್ರತಿಭಟನೆ ಬಿಸಿ
ಇನ್ನು ಮೇಕೆದಾಟು ಯೋಜನೆಗೆ ತಮಿಳುನಾಡು ರಾಜ್ಯ ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಕನ್ನಡ ಚಳವಳಿ ವಾಟಾಳ್ ಪಕ್ಷ, ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಕನ್ನಡ ಪರ ಸಂಘಟನೆಗಳು  ಬಂದ್ ಆಚರಿಸುತ್ತಿವೆ. ಚಾಮರಾಜನಗರದಲ್ಲಿ ಬಂದ್ ಆಚರಿಸುತ್ತಿರುವ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ತಮಿಳುನಾಡು ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಮತ್ತು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಪ್ರತಿಕೃತಿ ಧಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಭದ್ರತೆ ಹೆಚ್ಚಳ
ಕರ್ನಾಟಕ ಬಂದ್ ನಿಮಿತ್ತ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಕೆಎಸ್ ಆರ್ ಪಿ, ತುರ್ತು ಪ್ರಹಾರದಳಗಳನ್ನು ನಿಯೋಜಿಸಲಾಗಿದೆ. ಮೆಜೆಸ್ಟಿಕ್, ವಿಧಾನಸೌಧ, ಶಿವಾಜಿನಗರ, ಜಯನಗರ, ಕೆಆರ್ ಮಾರುಕಟ್ಟೆ, ಕಬ್ಬನ್ ಪಾರ್ಕ್ ಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇನ್ನು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT