ನರೇಂದ್ರ ಮೋದಿ ಅವರೊಂದಿಗೆ ಕರ್ನಾಟಕದ ಕೇಂದ್ರ ಸಚಿವರ ನೇತೃತ್ವದ ಸಂಸದರ ನಿಯೋಗ 
ಪ್ರಧಾನ ಸುದ್ದಿ

ಕಾಯಕಯೋಗಿಗೆ ಶಿರಬಾಗಿ ನಮಿಸುವೆ: ಪ್ರಧಾನಿ ಮೋದಿ

ಕಾಯಕಯೋಗಿ ಬಸವೇಶ್ವರ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ...

ನವದೆಹಲಿ: ಕಾಯಕಯೋಗಿ ಬಸವೇಶ್ವರ ಜಯಂತಿ ಅಂಗವಾಗಿ ಬಸವೇಶ್ವರರ ಭಾವಚಿತ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕರ್ನಾಟಕದ ಕೇಂದ್ರ ಸಚಿವರ ನೇತೃತ್ವದ ಸಂಸದರ ನಿಯೋಗವು ಸಲ್ಲಿಸಿತು.

ಸಂಸತ್ ಆವರಣದಲ್ಲಿರುವ ಬಸವೇಶ್ವರ ಪ್ರತಿಮೆಗೆ ಕೇಂದ್ರ ರಸಾಯನ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತಕುಮಾರ್, ಕಾನೂನು ಸಚಿವ ಸದಾನಂದಗೌಡ, ಮಧ್ಯಮ ಕೈಗಾರಿಕೆ ಸಚಿವ ಜಿ.ಎಂ.ಸಿದ್ದೇಶ್ವರ ಅವರು ಮಾಲಾರ್ರ್ಪಣೆ ಮಾಡಿ ಗೌರವ ಸಲ್ಲಿಸಿದರು.

ನಿಯೋಗದಲ್ಲಿ ಸಂಸದರಾದ ಬಿ.ಎಸ್.ಯಡಿಯೂರಪ್ಪ, ಪ್ರಹ್ಲಾದ ಜೋಶಿ, ಪ್ರತಾಪ್ ಸಿಂಹ, ಪಿ.ಸಿ.ಗದ್ದಿಗೌಡರು, ನಳಿನ ಕುಮಾರ್ ಕಟೀಲ್, ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆ, ಸಂಗಣ್ಣ ಕರಡಿ, ಪಿ.ಸಿ ಮೋಹನ್, ಸುರೇಶ್ ಅಂಗಡಿ ಭಾಗವಹಿಸಿದ್ದರು.

ತಲೆಬಾಗಿ ನಮಿಸುತ್ತೇನೆ: ಕಾಯಕ ಯೋಗಿ ಬಸವಣ್ಣನವರಿಗೆ ನಾನು ತಲೆಬಾಗಿ ನಮಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಬಸವ ಜಯಂತಿ ಅಂಗವಾಗಿ ಶುಭ ಕೋರಿರುವ ಪ್ರಧಾನಿ, ಸಮಾಜ ಸುಧಾರಣೆ ಮತ್ತು ಸೇವೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟ ಬಸವಣ್ಣನವರಿಗೆ ಬಸವ ಜಯಂತಿಯಂದು ನಾನು ತಲೆಬಾಗಿ ನಮಿಸುತ್ತೇನೆ. ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಚುನಾವಣಾ ಆಯೋಗದಲ್ಲಿ ಆಂತರಿಕ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭರ್ಥಿ ಮಾಡಿ, ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!

ಹಬ್ಬದ ಸಂಭ್ರಮದ ನಡುವೆ ದುರಂತ; ಕೊಯೆಲ್ ನದಿಯಲ್ಲಿ ಮೂವರು ಅಪ್ರಾಪ್ತರು ಸೇರಿ 5 ಮಂದಿ ಜಲಸಮಾಧಿ!