ಕರ್ನಾಟಕ ಹೈ ಕೋರ್ಟ್ 
ಪ್ರಧಾನ ಸುದ್ದಿ

ಬಿಬಿಎಂಪಿ ಚುನಾವಣೆ: ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ರದ್ದು

ಮೇ 30ರೊಳಗೆ ಬೃಹತ್ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂಬ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಶುಕ್ರವಾರ ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿ....

ಬೆಂಗಳೂರು: ಮೇ 30ರೊಳಗೆ ಬೃಹತ್ ಮಹಾನಗರ ಪಾಲಿಕೆಗೆ ಚುನಾವಣೆ ನಡೆಸಬೇಕು ಎಂಬ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಶುಕ್ರವಾರ ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿ ತೀರ್ಪು ನೀಡಿದೆ. ಇದರಿಂದ ಸರ್ಕಾರಕ್ಕೆ ಚುನಾವಣೆ ನಡೆಸಲು ಆರು ತಿಂಗಳ ಕಾಲವಕಾಶ ಸಿಕ್ಕಂತಾಗಿದೆ.

ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಮತ್ತು ರಾಮಮೋಹನ್ ರೆಡ್ಡಿ ಅವರನ್ನೊಳಗೊಂಡ ವಿಭಾಗೀಯ ಪೀಠ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಅರ್ಜಿಯ ವಿಚಾರಣೆ ವೇಳೆ ಸರ್ಕಾರದ ಪರವಾಗಿ ವಾದ ಮಂಡನೆ ಮಾಡಿದ ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್, ಸದ್ಯ ಬಿಬಿಎಂಪಿಯನ್ನು ಸೂಪರ್ ಸೀಡ್ ಮಾಡಲಾಗಿದೆ. 6 ತಿಂಗಳಿನಲ್ಲಿ ಚುನಾವಣೆ ನಡೆಸುತ್ತೇವೆ. ಆದ್ದರಿಂದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ವಾದ ಮಂಡಿಸಿದರು.

ಸದ್ಯ ಹೈಕೋರ್ಟ್ ವಿಭಾಗೀಯ ಪೀಠದ ಆದೇಶದಿಂದ ಸರ್ಕಾರಕ್ಕೆ ಸ್ಪಲ್ಪ ಸಮಾಧಾನ ತಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT