ನೀತು ಅಗರ್‌ವಾಲ್‌ 
ಪ್ರಧಾನ ಸುದ್ದಿ

ರಕ್ತಚಂದನ ಕಳ್ಳಸಾಗಣೆ ದಂಧೆ ಹಿಂದೆ ಆಂಧ್ರ ನಟಿ ನೀತು?

ಟಾಲಿವುಡ್ ನಟಿ ನೀತು ಅಗರ್‌ವಾಲ್‌ ಅವರು ರಕ್ತಚಂದನ ಕಳ್ಳ ಸಾಗಣೆ ದಂಧೆಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಮಗ್ಲಿಂಗ್ ಕಿಂಗ್ ಪಿನ್ ಕೊಂಡಪಲ್ಲಿ...

ಕರ್ನೂಲ್: ಟಾಲಿವುಡ್ ನಟಿ ನೀತು ಅಗರ್‌ವಾಲ್‌ ಅವರು ರಕ್ತಚಂದನ ಕಳ್ಳ ಸಾಗಣೆ ದಂಧೆಯಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಮಗ್ಲಿಂಗ್ ಕಿಂಗ್ ಪಿನ್ ಕೊಂಡಪಲ್ಲಿ ಮಸ್ತಾನ್ ವಾಲಿಗೆ ನಟಿ ಸಹಕರಿಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯ ಮಸ್ತಾನ್ ವಾಲಿ ನ್ಯಾಯಾಂಗ ಬಂಧನದಲ್ಲಿದ್ದು, ನಾಪತ್ತೆಯಾಗಿರುವ ನಟಿ ನೀತು ಅಗರ್‌ವಾಲ್‌ ಗಾಗಿ ಕರ್ನೂಲ್ ಪೊಲೀಸರು ಬೆಂಗಳೂರು, ಹೈದರಾಬಾದ್ ಹಾಗೂ ಮುಂಬೈನಲ್ಲಿ ಶೋಧ ನಡೆಸುತ್ತಿದ್ದಾರೆ.

ಪೊಲೀಸರು ಮಸ್ತಾನ್ ಡೈರಿ ಹಾಗೂ ದೂರವಾಣಿ ಕರೆಯನ್ನು ಪರಿಶೀಲಿಸಿದ್ದು, ರಕ್ತ ಚಂದನ ಕಳ್ಳತನಕ್ಕೆ ಸಂಬಂಧಿಸಿದ ಹಣವು ನೀತು ಅವರ ಬ್ಯಾಂಕ್‌ ಅಕೌಂಟ್‌ನಿಂದ ಕರ್ನೂಲಿನ ಕೆಲವು ಸ್ಥಳೀಯ ಅರಣ್ಯ ಚೋರರಿಗೆ ವರ್ಗಾವಣೆಗೊಂಡಿರುವ ಮಾಹಿತಿ ಲಭ್ಯವಾಗಿದೆ ಎನ್ನಲಾಗುತ್ತಿದೆ.

ಈ ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಆರೋಪಿಗಳು ಈ ವಿಚಾರಣೆಯ ಸಂದರ್ಭದಲ್ಲಿ ನೀತು ಅವರ ಹೆಸರನ್ನು ಬಾಯ್ದಿಟ್ಟಿದ್ದು, ನಟಿಯ ಖಾತೆಯಿಂದ ಹಣ ವರ್ಗಾವಣೆಗೊಂಡಿದೆ ಎಂಬ ಆರೋಪ ಮಾಡಿದ್ದರು.

ರಕ್ತ ಚಂದನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಟಿ ನೀತು ವಿರುದ್ಧ ಇದುವರೆಗೂ ಪ್ರಕರಣ ದಾಖಲಿಸಿಲ್ಲ. ಆದರೆ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಿದ ನಂತರ ನಟಿ ವಿರುದ್ಧ ದೂರು ದಾಖಲಿಸುವ ಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ.

ಕಳೆದ ಎರಡು ತಿಂಗಳ ಹಿಂದೆ ರಕ್ತ ಚಂದನ ಕಳ್ಳಸಾಗಣೆ ಪ್ರಕರಣವನ್ನು ಭೇದಿಸಿದ್ದ ಆಂಧ್ರಪ್ರದೇಶ ಪೊಲೀಸರು 34 ರಕ್ತ ಚಂದನ ದಿಮ್ಮಿಗಳನ್ನು ಕರ್ನೂಲ್‌ನಲ್ಲಿ ವಶಪಡಿಸಿಕೊಂಡಿದ್ದರು. ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ 8 ಮಂದಿಯನ್ನು ಬಂಧಿಸಲಾಗಿತ್ತು.

ಇತ್ತೀಚೆಗಷ್ಟೇ ತಮಿಳುನಾಡಿನ 20 ರಕ್ತಚಂದನ ಕಳ್ಳಸಾಗಣೆದಾರರನ್ನು ಆಂಧ್ರ ಪೊಲೀಸರು ಚಿತ್ತೂರು ಬಳಿಯ ಅರಣ್ಯದಲ್ಲಿ ಹತ್ಯೆ ಮಾಡುವುದರೊಂದಿಗೆ ರಕ್ತಚಂದನವು ಭಾರಿ ಸುದ್ದಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್