ಪ್ರಧಾನಮಂತ್ರಿ ನರೇಂದ್ರ ಮೋದಿ 
ಪ್ರಧಾನ ಸುದ್ದಿ

ಜನರ ಮೊರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ

ನವದೆಹಲಿ ಸುತ್ತಮುತ್ತ ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ಮೊರೆಗೆ ಸ್ಪಂಧಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ...

ನವದೆಹಲಿ: ನವದೆಹಲಿ ಸುತ್ತಮುತ್ತ ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವುದರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜನರ ಮೊರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಮೋದಿ ಸೂಚನೆ ನೀಡಿದ್ದಾರೆ.

ಈ ಕುರಿತಂತೆ ಇಂದು ತಮ್ಮ ಟ್ವಿಟರ್ ಖಾತೆಯ ಮೂಲಕ ಪ್ರತಿಕ್ರಿಯೆ ನೀಡಿರುವ ಮೋದಿ ಅವರು, ಭೂಕಂಪನ ಎಲ್ಲೆಲ್ಲಿ ಆಗಿದೆ ಎಂಬುದರ ಕುರಿತಂತೆ ಸ್ಪಷ್ಟ ಮಾಹಿತಿ ತಿಳಿದು ಬಂದಿಲ್ಲ. ಕ್ಷಣಕ್ಷಣದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಾಗೂ ಜನರ ಮೊರೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸ್ಪಷ್ಟಮಾಹಿತಿ ತಿಳಿದ ನಂತರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ನವದೆಹಲಿಯ ಸುತ್ತಮುತ್ತಲಿನ ಪ್ರದೇಶವಾದ ಪಾಟ್ನಾ, ಅಸ್ಸಾಂ, ಜಾರ್ಖಾಂಡ್, ಕೋಲ್ಕತಾ, ಲಖನೌ ಸೇರಿದಂತೆ ಉತ್ತರ ಹಾಗೂ ಪೂರ್ವ ಭಾರತದ ಹಲವೆಡೆ  ಸುಮಾರು 10 ರಿಂದ 20 ಸೆಕೆಂಡ್ ಗಳ ಕಾಲ ಭೂಮಿ ಕಂಪಿಸಿತ್ತು. ಭೂ ಕಂಪನದಿಂದಾಗಿ ಜನರು ತಮ್ಮ ಆತಂಕ ವ್ಯಕ್ತಪಡಿಸಿದ್ದು, ತಮ್ಮ ಮನೆ ಹಾಗೂ ಕಚೇರಿಯಿಂದ ಹೊರ ಬಂದಿದ್ದರು. ಇದೀಗ ದೆಹಲಿಯಲ್ಲಿ ಮತ್ತೆ ಮತ್ತೆ ಭೂಮಿ ಕಂಪಿಸುತ್ತಿದ್ದು, ಜನರ ಆತಂಕ ಮತ್ತಷ್ಟು ಹೆಚ್ಚಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT