ನಟಿ ನೀತು ಅಗರವಾಲ್ 
ಪ್ರಧಾನ ಸುದ್ದಿ

ರಕ್ತಚಂದನ ಕಳ್ಳಸಾಗಣೆ ದಂಧೆ: ಟಾಲಿವುಡ್ ನಟಿ ನೀತು ಬಂಧನ

ರಕ್ತಚಂದನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟಿ ನೀತು ಅಗರ್‌ವಾಲ್‌ ಅವರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಕರ್ನೂಲ್: ರಕ್ತಚಂದನ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟಿ ನೀತು ಅಗರ್‌ವಾಲ್‌ ಅವರನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಸ್ಮಗ್ಲಿಂಗ್ ಕಿಂಗ್ ಪಿನ್ ಕೊಂಡಪಲ್ಲಿ ಮಸ್ತಾನ್ ವಾಲಿಗೆ ಸಹಕರಿಸಿದ ಆರೋಪದ ಎದುರಿಸುತ್ತಿರುವ ನಟಿ ನೀತು, ಕಳೆದ ಕೆಲ ದಿನಗಳಿಂದ ತಲೆ ಮರೆಸಿಕೊಂಡಿದ್ದರು.

ಪ್ರೇಮ ಪ್ರಯಾಣಂ ಚಿತ್ರದ ಮೂಲಕ ಖ್ಯಾತಿಯಾಗಿದ್ದ ನಟಿ ನೀತು ಅವರನ್ನು ಕಡೆಗೂ ಕರ್ನೂಲ್ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ನಟಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕರ್ನೂಲ್ ಪೊಲೀಸರು ಎರಡು ತಿಂಗಳ ಹಿಂದೆ 34 ರಕ್ತ ಚಂದನ ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಕೊಂಡಪಲ್ಲಿ ಮಸ್ತಾನ್‌ ವಾಲಿ ಸೇರಿದಂತೆ ಹಲವರನ್ನು ಬಂಧಿಸಲಾಗಿದ್ದು, ನೀತಾ ಅಗರ್ವಾಲ್‌ 10ನೇ ಆರೋಪಿಯಾಗಿದ್ದಾರೆ.

ರಕ್ತ ಚಂದನ ಚೋರರಿಗೆ ನೀತು ಅಗರ್ವಾಲ್‌ ಬ್ಯಾಂಕ್‌ ಖಾತೆಯಿಂದ ಹಣ  ವರ್ಗಾವಣೆಗೊಂಡಿದೆ ಎನ್ನುವ ಅಂಶ ವಿಚಾರಣೆಯ ವೇಳೆ ಪೊಲೀಸರಿಗೆ ತಿಳಿದುಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!