ಪ್ರಧಾನ ಸುದ್ದಿ

ಪಕ್ಷಗಳಲ್ಲಿ ಸಭೆಗಳ ಪರ್ವ ಆರಂಭ

ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಅಧಿಸೂಚನೆ ಹೊರಡಿಸುವ ದಿನ ಹತ್ತಿರವಾಗುತ್ತಿದ್ದಂತೆ ನಾನಾ ಪಕ್ಷಗಳ ಸಭೆ ಆರಂಭವಾಗಿವೆ. ನಿವಾರ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಕಚೇರಿಗಳಲ್ಲಿ ಪಕ್ಷದ ರಾಜ್ಯ ಮುಖಂಡರ ನೇತೃತ್ವದಲ್ಲಿ ಸಭೆಗಳು ನಡೆದಿವೆ. ಪಕ್ಷದ ಪ್ರಣಾಳಿಕೆ, ಪ್ರಚಾರ, ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಗಾ ಸೇರಿದಂತೆ ವಿವಿಧ ಕಾರ್ಯಗಳಿಗೆ ಸಮಿತಿಗಳನ್ನು ರಚಿಸಲು ಸಭೆಯಲ್ಲಿ ಚರ್ಚೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆ ಹಾಗೂ ಯಾವ ವಿಧಾನಸಭೆ ಕ್ಷೇತ್ರ, ವಾರ್ಡ್‍ಗಳಲ್ಲಿ ರಾಜಕೀಯ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ
ಚರ್ಚಿಸಲಾಗಿದೆ.

ಸಭೆಗಳಲ್ಲಿ ವಾರ್ಡ್ ಮಟ್ಟದ ಕಾರ್ಯಕರ್ತರೂ ಭಾಗವಹಿಸಿದ್ದು, ಅಭ್ಯರ್ಥಿಗಳ ಆಯ್ಕೆಗೆ ಹೆಸರು ಸೂಚಿಸುವ ಪ್ರಕ್ರಿಯೆ ನಡೆಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ಅಧ್ಯಕ್ಷತೆ ಯಲ್ಲಿ ಮಲ್ಲೇಶ್ವರದ ಕಚೇರಿಯಲ್ಲಿ ಸಭೆಗಳು ನಡೆದಿವೆ. ಪಕ್ಷದ ಎಲ್ಲ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದು, ವಿಧಾನಸಭಾ ಕ್ಷೇತ್ರಗಳಲ್ಲಿ ರಾಜಕೀಯ ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಚರ್ಚೆ ನಡೆದಿದೆ. ಚುನಾವಣೆಗೆ ಪ್ರಚಾರ ನಡೆಸಲು, ಪ್ರಣಾಳಿಕೆ ತಯಾರಿಸಲು ಹಾಗೂ ಚುನಾವಣೆ ನಿರ್ವಹಣೆ ಮಾಡಲು ಸಮಿತಿಗಳನ್ನು ರಚಿಸುವ ಬಗ್ಗೆ ಚರ್ಚಿಸಲಾಗಿದೆ. ಪ್ರತಿ ವಾರ್ಡ್‍ಗಳಲ್ಲಿ ಅಭ್ಯರ್ಥಿಗಳು ಏನು ಮಾಡಬೇಕು, ಪ್ರತಿಪಕ್ಷಗಳಿಗೆ ವಾರ್ಡ್‍ಗಳಲ್ಲಿ ಯಾವ ರೀತಿಯ ಬೆಂಬಲವಿದೆ ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಯಾವ ಮಾನದಂಡ ಅನುಸರಿಸಬೇಕು ಎಂದು ಮುಖಂಡರು ಚರ್ಚಿಸಿದ್ದಾರೆ.

ಎಲ್ಲ ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 250 ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದು, ಅಭ್ಯರ್ಥಿ ಗಳ ಆಯ್ಕೆಗೆ ಹೆಸರು ಸೂಚಿಸಿದ್ದಾರೆ. ಸಭೆಯಲ್ಲಿ ಪ್ರಣಾಳಿಕೆ ಬಗ್ಗೆಯೂ ಚರ್ಚೆಯಾಗಿದೆ. ನಗರದಲ್ಲಿ ಪರಿಸರ ಸಂರಕ್ಷಣೆ, ಮರಗಳ ಸಂಖ್ಯೆ ಹೆಚ್ಚಿಸುವ ಯೋಜನೆ, ರಸ್ತೆ ಸುರಕ್ಷತೆ, ಪಾರ್ಕಿಂಗ್‍ಗೆ ಸೂಕ್ತ ವ್ಯವಸ್ಥೆ ಸೇರಿದಂತೆ ನಗರದ ಸಮಗ್ರ ಅಬಿsವೃದಿಟಛಿಗೆ ಕಾರಣವಾಗುವ ಪ್ರಮುಖ ಅಂಶಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ವಾರ್ಡ್ ಮಟ್ಟದಲ್ಲಿ ಅಗತ್ಯವಿರುವ ಯೋಜನೆಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಲು ಕಾರ್ಯಕರ್ತರು ಸಭೆಯಲ್ಲಿ ಸೂಚಿಸಿದ್ದಾರೆ.

ಕಾಂಗ್ರೆಸ್ ತಯಾರಿ: ಕಾಂಗ್ರೆಸ್‍ನಲ್ಲೂ ಚುನಾವಣೆಗೆ ಸಿದ್ಧತೆ ಜೋರಾಗಿದೆ. ಹಿಂದೆ ಚುನಾವಣೆ ಘೋಷಣೆಯಾದ ಸಂದರ್ಭದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಸುಮಾರು 800 ಅರ್ಜಿಗಳು ಬಂದಿದ್ದವು. ಮತ್ತೆ ಚುನಾವಣೆ ಹೊಸದಾಗಿ ಘೋಷಣೆಯಾದಾಗ ಈ ಅರ್ಜಿಗಳ ಜೊತೆಗೆ ಮತ್ತಷ್ಟು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈಗ ಪಕ್ಷದಲ್ಲಿ ವಾರ್ಡ್ ಮಟ್ಟದಲ್ಲಿ ಹಾಗೂ ಬ್ಲಾಕ್ ಮಟ್ಟದಲ್ಲಿ ಸಭೆಗಳು ನಡೆಯುತ್ತಿವೆ. ಅಭ್ಯರ್ಥಿಗಳ ಆಯ್ಕೆ ಹಾಗೂ ಪ್ರಣಾಳಿಕೆ ರಚಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್ಷದ ಪ್ರಮುಖರನ್ನು ಸೇರಿಸಿಕೊಂಡು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಬೇಕು ಎಂದು ನಿರ್ಧರಿಸಲಾಗಿದೆ.

ಜೆಡಿಎಸ್‍ನಲ್ಲೂ ಬಿರುಸಿನ ಚಟುವಟಿಕೆಗಳು ಆರಂಭವಾಗಿದ್ದು, ಸಭೆಗಳು ಆರಂಭವಾಗಿವೆ. ಈ ಬಾರಿ ಪ್ರಬಲ ಪಕ್ಷಗಳಿಗೆ ಪೈಪೋಟಿ ನೀಡಲು ಹೊಸ ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡುವ ಬಗ್ಗೆ ಚರ್ಚಿಸಲಾಗಿದೆ. ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷಕ್ಕೆ ಈ ಬಾರಿ ಬಹುಜನರ ಬೆಂಬಲ ವ್ಯಕ್ತವಾಗುವ ಮಟ್ಟಿಗೆ ಪ್ರಚಾರ ನಡೆಸಬೇಕೆಂದು ತೀರ್ಮಾನಿಸಲಾಗಿದೆ. ಜೊತೆಗೆ
198 ವಾರ್ಡ್‍ಗಳಲ್ಲೂ ಪ್ರಬಲ ಅಭ್ಯರ್ಥಿಗಳನ್ನು ನಿಲ್ಲಿಸಬೇಕು ಎಂದು ಹಿರಿಯ ಮುಖಂಡರು ಸಭೆಯಲ್ಲಿ ಸೂಚಿಸಿದ್ದಾರೆ.

SCROLL FOR NEXT