ಬೆಂಗಳೂರು: ಇಂದಿರಾನಗರದ ಖಾಸಗಿ ಶಾಲೆಯೊಂದರಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬ ದೂರು ಬಂದಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ನೆನ್ನೆ ಶಾಲೆಯಿಂದ ಮನೆಗೆ ಬಂದ ಬಾಲಕಿ ಖಾಸಗಿ ಅಂಗಾಗಗಳಲ್ಲಿ ನೋವಿರುವುದನ್ನು ತನ್ನ ಪೋಷಕರಿಗೆ ತಿಳಿಸಿದ ಮೇಲೆ ವಿಷಯ ತಿಳಿದ ಪೋಷಕರು ಪೊಲೀಸರಿಗೆ ತಿಳಿಸಿದ್ದಾರೆ.
ಕಳೆದ ಸಂಜೆ ಬೌರಿಂಗ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣಾ ಕಾಯ್ದೆ (ಪಿ ಒ ಸಿ ಎಸ ಒ) ಅಡಿ ಪ್ರಕರಣ ದಾಖಲಿಸಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.