ಸತ್ರಜ್ ಅಜೀಜ್ 
ಪ್ರಧಾನ ಸುದ್ದಿ

ಆಜೀಜ್ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದರೆ ಸರ್ಕಾರದಿಂದ ಸೂಕ್ತ ಉತ್ತರ

ಆಗಸ್ಟ್ ೨೩ ರಂದು ಭಯೋತ್ಪಾದನೆ ಬಗ್ಗೆ ಮಾತುಕತೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಸತ್ರಜ್ ಅಜೀಜ್ ಅವರನ್ನು ಭೇಟಿ ಮಾಡಲು ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ

ನವದೆಹಲಿ: ಆಗಸ್ಟ್ ೨೩ ರಂದು ಭಯೋತ್ಪಾದನೆ ಬಗ್ಗೆ ಮಾತುಕತೆ ನಡೆಸಲು ಭಾರತಕ್ಕೆ ಆಗಮಿಸುತ್ತಿರುವ ಸತ್ರಜ್ ಅಜೀಜ್ ಅವರನ್ನು ಭೇಟಿ ಮಾಡಲು ಕಾಶ್ಮೀರಿ ಪ್ರತ್ಯೇಕವಾದಿಗಳಿಗೆ  ಪಾಕಿಸ್ತಾನ ರಾಯಭಾರ ಕಚೇರಿ ಆಹ್ವಾನ ನೀಡಿರುವ ಸಂಗತಿಯನ್ನು ತೀವ್ರವಾಗಿ ಪರಿಗಣಿಸಿರುವ ಭಾರತ ಈ ಭೇಟಿ ನಡೆದರೆ ಸರ್ಕಾರ ಸೂಕ್ತ ಉತ್ತರ ನೀಡಲಿದೆ ಎಂದಿದೆ.

ಅಜೀಜ್ ಅವರು ಭಾರತೀಯ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿ ಭಯೋತ್ಪಾದನೆ ಬಗ್ಗೆ ಚರ್ಚಿಸಲು ಭಾರತಕ್ಕೆ ಬರುತ್ತಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ರಾಯಭಾರಿ ಕಚೇರಿ ಕಾಶ್ಮೀರಿ ಪ್ರತ್ಯೇಕವಾದಿಗಳನ್ನು ಆಹ್ವಾನಿಸಿದೆ. ಇದರಿಂದ ಭಾರತ ಸರ್ಕಾರ ತೀವ್ರ ಅಸಮಧಾನಗೊಂಡಿದೆ ಎಂದು ಮೂಲಗಳು ತಿಳಿಸಿವೆ.

"ಏನಾಗುತ್ತದೆ ನೋಡೋಣ (ಅವರು ಪ್ರತ್ಯೇಕವಾದಿಗಳನ್ನು ಭೇಟಿ ಮಾಡಿದರೆ), ಸರ್ಕಾರ ಅದಕ್ಕೆ ಸೂಕ್ತ ಉತ್ತರ ನೀಡುತ್ತದೆ" ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಕಾಶ್ಮೀರಿ ಪ್ರತ್ಯೇಕವಾದಿ ಸಯ್ಯದ್ ಅಲಿ ಗಿಲಾನಿಯನ್ನು ಅಜೀಜ್ ಅವರನ್ನು ಭೇಟಿ ಮಾಡಲು ಆಹ್ವಾನಿಸಿದ್ದರೆ, ಮೀರ್ವಾಜ್ ಉಮರ್ ಫರೂಕ್ ನಂತಹ ಇತರ ಪ್ರತ್ಯೇಕವಾದಿ ನಾಯಕರನ್ನು ಪಾಕಿಸ್ತಾನ ರಾಜಭಾರಿ ಕಚೇರಿ ಅಜೀಜ್ ಅವರಿಗೆ ನೀಡುತ್ತಿರುವ ಗೌರವದಲ್ಲಿ ಭಾಗಿಯಾಗಲು ಆಹ್ವಾನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?