ಲೋಕಾಯುಕ್ತ ಕಚೇರಿ (ಸಂಗ್ರಹ ಚಿತ್ರ) 
ಪ್ರಧಾನ ಸುದ್ದಿ

ಲೋಕಾ ಹಗರಣ: 10ನೇ ಆರೋಪಿ ಸೆರೆ

ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸಿರುವ ಎಸ್‍ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿದೆ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸಿರುವ ಎಸ್‍ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿದೆ.

ನರಸಿಂಹರಾವ್ ಬಂಧಿತ ಆರೋಪಿ. ಇವರು ಲೋಕಾಯುಕ್ತ ನ್ಯಾ. ವೈ.ಭಾಸ್ಕರ್‍ರಾವ್ ಅವರ ಪತ್ನಿಯ ಸಹೋದರಿಯ ಮಗ ಎಂದು ಹೇಳಲಾಗಿದೆಯಾದರೂ, ಪೊಲೀಸರು ಇದನ್ನು ಖಚಿತಪಡಿಸಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಬೇಕಿದೆ ಎಂದಿದ್ದಾರೆ. ಗುರುವಾರ ಹೈದರಾಬಾದ್‍ನಲ್ಲಿ ನರಸಿಂಹರಾವ್ ಅವರನ್ನು ಬಂಧಿಸಿದ ಎಸ್‍ಐಟಿ ಅಧಿಕಾರಿಗಳ ತಂಡ, ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಆ.26ರವರೆಗೆ ತಮ್ಮ ವಶಕ್ಕೆ ಪಡೆದರು.

ಉದ್ಯಮಿ ಪಿ.ಎನ್.ಕೃಷ್ಣಮೂರ್ತಿ ದಾಖಲಿಸಿದ್ದ ಪ್ರಕರಣದಲ್ಲಿ ಈ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ-ದಲ್ಲಿ ಇವರು ಐದನೇ ಆರೋಪಿಯಾಗಿದ್ದಾರೆ. ಹೈದರಾಬಾದ್‍ನ ಲಕಡಿಕಪೂಲ್ ಬಳಿಯ ಆದರ್ಶನಗರದಲ್ಲಿರುವ ಸ್ನೇಹಿತ ವೆಂಕಟೇಶ್ವರ್ ರಾವ್‍ನ ಕಚೇರಿಯಲ್ಲಿ ಗುರುವಾರ ರಾತ್ರಿ 9.15ಕ್ಕೆ ನರಸಿಂಹ ರಾವ್‍ನನ್ನು ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಶುಕ್ರವಾರ ಬೆಳಗ್ಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಅಧಿಕಾರಿಗಳು ಸಂಜೆ 4.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಎಸ್‍ಐಟಿ ಅಧಿಕಾರಿಗಳ ಮನವಿ ಪುರಸ್ಕರಿಸಿದ ನ್ಯಾಯಾಧೀಶ ವಿ.ಜಿ.- ಬೋ-ಪಯ್ಯ, ಆ.26ರವೆರೆಗೆ ಪೊಲೀಸ್ ವಶಕ್ಕೆ ನೀಡಿದರು. ಲೋಕಾಯುಕ್ತರ ಪುತ್ರ ಅಶ್ವಿನ್‍ರಾವ್ ಗೆ ಕೃಷ್ಣಮೂರ್ತಿಯವರನ್ನು ಪರಿಚಯಿಸಿ ಹಣದ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಆರೋಪಿ ನರಸಿಂಹರಾವ್‍ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT